ನೀಟ್ ಹೋರಾಟಕ್ಕೆ ಸಂಬಂಧಿಸಿದ ಹೇಳಿಕೆ: ಬಂಧನ ಭೀತಿಯಿಂದ ಸಿ.ಟಿ. ರವಿ ಪಾರು
CT Ravi: ನೀಟ್ ಪ್ರತಿಭಟನೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ಐಆರ್ ಪ್ರಕರಣ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಅಲ್ಲದೆ ಎಫ್ಐಆರ್ ಪ್ರಶ್ನಿಸಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಜುಲೈ 31ಕ್ಕೆ ವಿಚಾರಣೆ ಮುಂದೂಡಿದೆ. ಇದರಿಂದ ಬಂಧನದ ಭೀತಿಯಿಂದ ಅವರು ಪಾರಾಗಿದ್ದಾರೆ.