ಕೆರೆ ಮಣ್ಣು ಅಕ್ರಮ ಸಾಗಣೆ: ಕೆರೆಗಳ ಮೂಲ ಸ್ವರೂಪಕ್ಕೆ ಧಕ್ಕೆ
ಬೇಸಿಗೆ ಕಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ನಿತ್ಯ ಜೆಸಿಬಿಯೊಂದಿಗೆ ಹತ್ತಾರು ಟ್ರ್ಯಾಕ್ಟರ್ ಬಳಸಿ ಮಣ್ಣು ತೆಗೆಯುವ ದಂಧೆ ಹೆಚ್ಚಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ,ಸೇರಿದಂತೆ ಇತರ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಕೆರೆಗಳಲ್ಲಿ ಇರುವ ಹೂಳು ತೆಗೆದು ಕೆರೆಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದರೆ ಮತ್ತೊಂದು ಕಡೆ ಕೆಲವರು ಅಕ್ರಮ ಮಣ್ಣುಗಾರಿಕೆ ಯಿಂದ ಹಣ ಸಂಪಾದಿಸಲು ಕೆರೆಗಳನ್ನು ಹಾಳು ಮಾಡಲು ಹೊರಟಿದ್ದಾರೆ