ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ
Dearness Allowance: ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.