GTTC Diploma ಓದಿದವರೂ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ
VAO Recruitment: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್ ಸಿ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಜಿಟಿಟಿಸಿ ನಡೆಸುತ್ತಿರುವ 3+1 (1 ವರ್ಷದ ಇಂಟರ್ನ್ಶಿಪ್ ಸೇರಿದಂತೆ) ವರ್ಷ ಅವಧಿಯ ಡಿಪ್ಲೋಮಾ ಕೋರ್ಸ್ ಪೂರೈಸಿದವರೂ ಅಪ್ಲೈ ಮಾಡಬಹುದು ಎಂದು ತಿಳಿಸಿದೆ.