ಏ.24ಕ್ಕೆ ಎಸ್‌ಎಸ್‌ಎಲ್‌ಸಿ, ಏಪ್ರಿಲ್ 7 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ
ಈ ಬಾರಿ ಸುಮಾರು 8.65 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ ಸುಮಾರು 8.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಅನ್ನು ಮೇ 18 ರಿಂದ ಮೇ 25ರವರೆಗೆ ನಡೆಸಲು ಮಂಡಳಿ ನಿರ್ಧರಿಸಿದೆ.