ಸೌಜನ್ಯ ಪ್ರಕರಣದ ಮರುತನಿಖೆ ಆದೇಶ ಸ್ವಾಗತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ
ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶದ ಪ್ರತಿಕ್ರಿಯಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ, ಕುಮಾರಿ ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ. ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಎಂದು ತಿಳಿಸಿದೆ.