ಗುಬ್ಬಿಯಲ್ಲಿ ಅದ್ದೂರಿ ದಿಂಡಿ ಉತ್ಸವ
ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಜುಲೈ.6 ರಂದು ಬೆಳಿಗ್ಗೆ 10 ಕ್ಕೆ ವಿಷ್ಣು ಸಹಸ್ರ ನಾಮ, ಕುಂಕುಮಾರ್ಚನೆ, ಅಷ್ಟೋತ್ತರ ಪೂಜೆ ನಡೆಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ಮಾಡಲಾಗುವುದು
ನಗರಸಭೆ ಆವರಣದಲ್ಲಿನ ಶೌಚಾಲಯವನ್ನು ಇತ್ತೀಚೆಗೆ ಮುಚ್ಚಲಾಗಿದೆ. ಇದು ಬಳಕೆಗೆ ಬರುವ ಅವಧಿಯಲ್ಲಿ ಕೂಡ ಸ್ವಚ್ಛತೆಯಿಲ್ಲದೆ, ಸರಿಯಾದ ನೀರಿನ ಸಂಪರ್ಕವಿಲ್ಲದೆ ಗಬ್ಬು ನಾರುತ್ತಿರುತ್ತದೆ. ನಗರಾಡಳಿತ, ಕಮಿಷನರ್ ಇತ್ತ ಗಮನ ಹರಿಸಿದಂತೆ ಕಾಣುತ್ತಿಲ್ಲ.ಕಾರಣ ನಗರದ ಸ್ವಚ್ಛತೆ ಕಾಪಾಡುವ ನಗರಸಭೆ ಆವರಣದಲ್ಲಿಯೇ ಶೌಚಾಲಯ ಗಬ್ಬು ನಾರುತ್ತಿದೆ ಎಂದರೆ ಉಳಿದೆಡೆ ಹೇಗೆ ಎನ್ನುವುದು ಸಾರ್ವಜನಿಕ ಪ್ರಶ್ನೆಯಾಗಿದೆ
ಜೆಡಿಎಸ್ ಪಕ್ಷವನ್ನು ಬಲಿಷ್ಟವಾಗಿ ಸಂಘಟನೆ ಮಾಡುವ ಮೂಲಕ ೨೦೨೮ಕ್ಕೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ.೯ರಂದು ಜಿಲ್ಲೆಯ ಗೌರಿಬಿದನೂರಿಗೆ ಆಗಮಿಸಲಿದ್ದು ಅಲ್ಲಿಂದ ಚಿಕ್ಕ ಬಳ್ಳಾಪುರಕ್ಕೆ ಆಗಮಿಸುವರು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲಕುಂಟಹಳ್ಳಿ ಮುನಿಯಪ್ಪ ತಿಳಿಸಿದರು.
ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ಸ್ವಯಂಪ್ರೇರಿತರಾಗಿ ಇತ್ಯರ್ಥಪಡಿಸಿಕೊಳ್ಳಲು ಎರಡೂ ಕಡೆಯವರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಇಬ್ಬರ ನಡುವಿನ ಬಾಂಧ ವ್ಯ ಉಳಿದು ವಿವಾದವು ಸುಖಾಂತ್ಯಗೊಳ್ಳುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರುತ್ತದೆ
Neeraj Chopra Classic-2025: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ʼನೀರಜ್ ಚೋಪ್ರಾ ಕ್ಲಾಸಿಕ್- 2025ʼ ಜಾವೆಲಿನ್ ಎಸೆತ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜತೆಯಾಗಿ ಪಾಲ್ಗೊಂಡು, ವಿಶ್ವ ಶ್ರೇಷ್ಠ ಜಾವೆಲಿನ್ ಎಸೆತಗಾರರ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದರು.
Raichur News: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿಯಲ್ಲಿ ಅವಘಡ ನಡೆದಿದೆ. ಅಲಾಯಿ ಕುಣಿಯಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ. ಬೆಂಕಿ ದೊಡ್ಡ ಪ್ರಮಾಣದಲ್ಲಿ ಹೊತ್ತಿ ಉರಿಯುತ್ತಿದ್ದರಿಂದ ಸ್ಥಳದಲ್ಲೇ ನೂರಾರು ಜನರಿದ್ದರೂ ಯುವಕನನ್ನು ರಕ್ಷಿಸಲು ಅಸಹಾಯಕರಾಗಿದ್ದಾರೆ.
ಕೆಲವರಿಗೆ ನಮ್ಮ ಅಭಿವೃದ್ಧಿ ಕೆಲಸಗಳನ್ನು ಸಹಿಸಲು ಸಾಧ್ಯವಾಗದೆ ನಮ್ಮ ವಿರುದ್ದ ಅಪ ಪ್ರಚಾರ ದಲ್ಲಿ ತೊಡಗಿದ್ದಾರೆ. ಶತ್ರುವಿನ ಕೊನೆ ಅಸ್ತ್ರವೇ ಅಪ ಪ್ರಚಾರ ಎಂದು ತಮ್ಮ ರಾಜಕೀಯ ವಿರೋಧಿಗಳ ವಿರುದ್ದ ವಾಗ್ದಾಳಿ ನಡೆಸಿದ ಅವರು ನೆರೆಯ ಮಧುಗಿರಿಯಲ್ಲಿ ಸರ್ಕಾರಿ ಜಮೀನನ್ನು ಕಬಳಿಸಿರುವು ದಾಗಿ ನನ್ನ ಮೇಲೆ ಸುಳ್ಳಿನ ಸರಮಾಲೆಯನ್ನು ಸೃಷ್ಟಿಸಿ,ಟಿವಿ ಚಾನಲುಗಳ ಕಚೇರಿಗೆ ಅಲೆದು ಪ್ರಚಾರ ಮಾಡುತ್ತಿದ್ದಾರೆ.
ಶಾಸಕರಾದ ಕೆಎಚ್ ಪುಟ್ಟಸ್ವಾಮಿ ಗೌಡರು ಶಾಸಕರಾಗುವ ಮುಂಚಿನಿಂದಲೂ ತಾಲೂಕಿನಲ್ಲಿ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದರು,ಶಾಸಕರಾದ ನಂತರವೂ ಅವರು ತಮ್ಮ ಸಮಾಜ ಮುಖಿ ಕೆಲಸಗಳನ್ನು ಮುಂದುವರಿಸಿಕೊAಡು ಬರುವ ಜೊತೆಗೆ ಸರ್ಕಾರದಿಂದ ಹೆಚ್ಚಿನ ರೀತಿ ಸವಲತ್ತುಗಳನ್ನು ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ
Shivamogga News: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
Actor Darshan: ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಹಬ್ಬ ಮಾಡುವ ನಟ ದರ್ಶನ್ ಅವರು, ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿ ನಿವಾಸದಲ್ಲಿ ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರನೊಂದಿಗೆ ಪೂಜೆ ನೆರವೇರಿಸಿದ್ದಾರೆ. ಅಲ್ಲದೇ ಚಾಮುಂಡಿ ಬೆಟ್ಟಕ್ಕೂ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.
Jockey 42 Movie: ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದಯೋನ್ಮುಖ ನಟ ಕಿರಣ್ ರಾಜ್, ಕಾಂಬಿನೇಷನ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಅದುವೇ ʼಜಾಕಿ 42ʼ ಮೂಲಕ. ‘ಜಾಕಿ 42’ ಚಿತ್ರಕ್ಕಾಗಿಯೇ ನಾಯಕ ನಟ ಕಿರಣ್ ರಾಜ್, ಥೈಲ್ಯಾಂಡ್‌ಗೆ ಹಾರ್ಸ್ ರೈಡಿಂಗ್ ಜಾಕಿ ಟ್ರೈನಿಂಗ್ ತೆಗೆದುಕೊಂಡು ಬಂದಿರುವುದು ವಿಶೇಷವಾಗಿದೆ.
Pralhad Joshi: ದೇಶದಲ್ಲಿ 21 ಕೋಟಿಗೂ ಹೆಚ್ಚು ದ್ವಿಚಕ್ರ ವಾಹನಗಳಿದ್ದು, ಸವಾರರ ಸುರಕ್ಷತೆ ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಮೋಟಾರು ವಾಹನ ಕಾಯ್ದೆ, 1988ರಡಿ ಹೆಲ್ಮೆಟ್ ಕಡ್ಡಾಯವಾಗಿದ್ದು, ಅದರ ಗುಣಮಟ್ಟಕ್ಕೂ ಆದ್ಯತೆ ಕೊಡಬೇಕಿದೆ. ಹಾಗಾಗಿ 2021ರಿಂದ ಗುಣಮಟ್ಟ ನಿಯಂತ್ರಣ ಆದೇಶ ಜಾರಿಯಲ್ಲಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್‌ಗೆ ಅವಕಾಶವಿಲ್ಲ. ಎಲ್ಲಾ ದ್ವಿಚಕ್ರ ವಾಹನ ಸವಾರರಿಗೆ BIS ಮಾನದಂಡದಂತೆ (IS 4151:2015) ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ಗಳನ್ನು ಗ್ರಾಹಕ ವ್ಯವಹಾರಗಳ ಇಲಾಖೆ ಕಡ್ಡಾಯಗೊಳಿಸುತ್ತದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
Laxmi Hebbalkar: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Swapna Mantapa Movie: ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶಿಸಿರುವ ‘ಸ್ವಪ್ನಮಂಟಪʼ ಕನ್ನಡ ಚಿತ್ರವು ಇದೇ ಜು. 25ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವು ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ಚಿತ್ರದ ನಾಯಕ-ನಾಯಕಿಯಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ.
Harshika Poonacha: ನನಗೆ ಕನ್ನಡ ಬರಲ್ಲ, ನಾನು ಹೈದರಾಬಾದ್‌ನವಳು ಎಂಬ ಹೇಳಿಕೆಗಳ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಇದೀಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ರಶ್ಮಿಕಾ ಹೇಳಿಕೆ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಪ್ರತಿಕ್ರಿಯಿಸಿ, ಈ ಹೇಳಿಕೆಯನ್ನ ಕ್ಷಮಿಸಿಬಿಡೋಣ. ರಶ್ಮಿಕಾ ಮಂದಣ್ಣ ಬಗ್ಗೆ ನೆಗೆಟಿವ್ ಮಾತಾಡೋದು ಬೇಡ. ನಾನಂತೂ ರಶ್ಮಿಕಾ ಅವರ ಬಗ್ಗೆ ನೆಗೆಟಿವ್ ಮಾತನಾಡಲ್ಲ ಎಂದು ಹೇಳಿದ್ದಾರೆ.
Ramayana First Look Teaser: ಜುಲೈ 3 ರಂದು ಭಾರತದ ಮುಂಬೈ, ದೆಹಲಿ, ಬೆಂಗಳೂರು ಸೇರಿ ಒಂಬತ್ತು ನಗರಗಳಲ್ಲಿ ಏಕಕಾಲದಲ್ಲಿ ರಾಮಾಯಣ: ದಿ ಇಂಟ್ರೊಡಕ್ಷನ್ ಫಸ್ಟ್ ಗ್ಲಿಂಪ್ಸ್ ಅನಾವರಣಗೊಳಿಸಲಾಗಿತ್ತು. ಇದಾದ ಬಳಿಕ ಜುಲೈ 4 ರಂದು, ನ್ಯೂಯಾರ್ಕ್‌ನ ಪ್ರಸಿದ್ಧ ಟೈಮ್ಸ್ ಸ್ಕ್ವೇರ್‌ನ ಡಿಜಿಟಲ್ ಬಿಲ್‌ಬೋರ್ಡ್‌ನಲ್ಲಿ ʼರಾಮಾಯಣʼ ಫಸ್ಟ್ ಲುಕ್ ಟೀಸರ್ ಪ್ರದರ್ಶನಗೊಂಡಿದೆ.
Santosh Jarkiholi: ಗೋಕಾಕ್ ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜಾತ್ರೆಯಲ್ಲಿ ಸಾವಿರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಶಿರಸಿ ಗ್ರಾಮೀಣ ಪೊಲೀಸರು ಶನಿವಾರ ಬೆಳಗಿನ ಜಾವ 3:00 ಗಂಟೆಗೆ ಬಂಧಿಸಿದ್ದಾರೆ. ಆರೋಪಿಗಳನ್ನು ವಿಕ್ರಮ್ ರಾಮಕೃಷ್ಣ ಭಟ್ (28) ಹಾಗೂ ಕಶ್ಯಪ್ ಮಂಜುನಾಥ ಹೆಗಡೆ (27) ಎಂದು ಗುರುತಿಸಲಾಗಿದ್ದು, ಇನ್ನೋವಾ ಕಾರ್‌ನಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಶಿರಸಿ ಕಡೆಗೆ ಸಾಗಿಸುತ್ತಿದ್ದರು
HD Kumaraswamy: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತನ್ನ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ನನ್ನ ಈ ಮಾತಿಗೆ ನಾನು ಈಗಲೂ ಬದ್ಧವಾಗಿದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
Stabbing case: ಪಾರ್ಕ್ ಮುಂಭಾಗದಲ್ಲಿಯುವತಿ ಜತೆ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಯುವಕ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯುವತಿ ಮೃತಪಟ್ಟಿದ್ದಾಳೆ. ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.