ಇದುವರೆಗೂ 5 ವಿಮಾನಗಳಲ್ಲಿ 1500 ಮಂದಿ ಗಲ್ಫ್‌ನಿಂದ ಬೆಂಗಳೂರಿಗೆ
ಕಳೆದ ಸೋಮವಾರ 2ನೇ ತಾರೀಕು ರಾತ್ರಿ 9.40ಕ್ಕೆ ಬಂದ ಮೊದಲ ಫ್ಲೈಟ್‌ನಲ್ಲಿ 213 ಜನ ವಾಪಸ್ ಆಗಿದ್ದರೆ, 3ನೇ ತಾರೀಕು ಮುಂಜಾನೆ 3 ಗಂಟೆಗೆ ಬಂದ 2ನೇ ಫ್ಲೈಟ್‌ನಲ್ಲಿ 490 ಜನ, ಹಾಗೇ ಅದೇ ದಿನ ಸಂಜೆ 7 ಗಂಟೆಗೆ ಬಂದ 3ನೇ ಫ್ಲೈಟ್‌ನಲ್ಲಿ 350 ಮಂದಿ, ನಾಲ್ಕನೇ ತಾರೀಕು ಮಧ್ಯರಾತ್ರಿ 1 ಗಂಟೆಗೆ ಬಂದ ಫ್ಲೈಟ್‌ನಲ್ಲಿ 200 ಜನ, ಉಳಿದಂತೆ ಬುಧವಾರ ಸಂಜೆ 7 ಗಂಟೆಗೆ ಬಂದ ವಿಮಾನದಲ್ಲಿ 246 ಪ್ರಯಾಣಿಕರು ವಾಪಸಾಗಿದ್ದು ಈವರೆಗೆ 1500 ಮಂದಿ ಸುರಕ್ಷಿತವಾಗಿ ಮರಳಿದ್ದಾರೆ.