ಚಳಿಯಲ್ಲಿಯೂ ರಂಗೇರಿದೆ ಚುನಾವಣೆಯ ಬಿಸಿ
13 ನಿರ್ದೇಶಕ ಸ್ಥಾನಗಳಿಗೆ ಅರ್ಹ ಅರ್ಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಬಿಜೆಪಿಯಿಂದ ಸಂಸದ ಡಾ.ಕೆ.ಸುಧಾಕರ್ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂಬ ಮಾತುಗಳಿದ್ದು, ಕಾಂಗ್ರೆಸ್ ನಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಜೆಡಿಎಸ್‌ನಿಂದ ಜೆ.ಕೆ.ಕೃಷ್ಣಾರೆಡ್ಡಿ ಅಖಾಡಕ್ಕೆ ಇಳಿ ದಿದ್ದು ಇದಕ್ಕೆ ನಿದರ್ಶನವೆಂಬಂತೆ ಇತ್ತೀಚೆಗೆ ಕಾಂಗ್ರೆಸ್‌ನ ಪಾಳೆಯದಲ್ಲಿ ಗುರುತಿಸಿಕೊಂಡಿರುವ ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡರ ಮನೆಗೆ ಆರೋಗ್ಯ ವಿಚಾರಣೆಯ ನೆಪದಲ್ಲಿ ಭೇಟಿ ನೀಡಿರುವುದನ್ನು ಗಮನಿಸಬಹುದು