ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಏ.6ರಂದು ಬೆಂಗಳೂರಿನಲ್ಲಿ ಛಂದ ಪುಸ್ತಕ ಬಹುಮಾನ ಪ್ರದಾನ ಸಮಾರಂಭ

ಏ.6ರಂದು ಬೆಂಗಳೂರಿನಲ್ಲಿ ಛಂದ ಪುಸ್ತಕ ಬಹುಮಾನ ಪ್ರದಾನ ಸಮಾರಂಭ

Chanda Pusthaka Award Ceremony: ಛಂದ ಪುಸ್ತಕ ವತಿಯಿಂದ ಏ.6 ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಬೆಂಗಳೂರು ನಗರದ ಬಸವನಗುಡಿಯ ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನಲ್ಲಿ ಛಂದ ಪುಸ್ತಕ ಬಹುಮಾನ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ಡಾ.ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ʼನಿಂಬಿಯಾ ಬನಾದ ಮ್ಯಾಗʼ ಚಿತ್ರದ ಟ್ರೇಲರ್ ಬಿಡುಗಡೆ

ಷಣ್ಮುಖ ಗೋವಿಂದರಾಜ್ ಅಭಿನಯದ ʼನಿಂಬಿಯಾ ಬನಾದ ಮ್ಯಾಗʼ ಚಿತ್ರದ ಟ್ರೇಲರ್ ಔಟ್‌

Nimbia Banada Myaga Movie: ಮೇರು ನಟ ಡಾ.ರಾಜಕುಮಾರ್ ಅವರ ಮೊಮ್ಮಗ (ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ ʼನಿಂಬಿಯಾ ಬನಾದ ಮ್ಯಾಗʼ (ಪೇಜ್ 1) ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಶೋಕ್ ಕಡಬ ನಿರ್ದೇಶಿಸಿರುವ ಈ ಚಿತ್ರವು ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Diesel price Hike: ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್;‌ ಡೀಸೆಲ್‌ ದರ 2 ರೂ. ಹೆಚ್ಚಳ!

ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್;‌ ಡೀಸೆಲ್‌ ದರ 2 ರೂ. ಹೆಚ್ಚಳ!

Diesel price Hike: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಡೀಸೆಲ್‌ ದರ ಏರಿಕೆಯಾಗಿದೆ. ರಾಜ್ಯ ಸರ್ಕಾರ ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಿದ್ದು, ಮಂಗಳವಾರ ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯವಾಗಲಿದೆ. ಹೈಸ್ಪೀಡ್ ಡೀಸೆಲ್ ದರ 2-3 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ.

Laxmi Hebbalkar: ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Actress Khushbu Sundar: ಕಷ್ಟಕಾಲದಲ್ಲಿ ರವಿಚಂದ್ರನ್‌ ಮಾಡಿದ್ದ ಸಹಾಯ ನೆನೆದ ನಟಿ ಖುಷ್ಬೂ

ಕಷ್ಟಕಾಲದಲ್ಲಿ ರವಿಚಂದ್ರನ್‌ ಮಾಡಿದ್ದ ಸಹಾಯ ನೆನೆದ ನಟಿ ಖುಷ್ಬೂ

Actress Khushbu Sundar: ಅನಾರೋಗ್ಯದ ಹಿನ್ನೆಲೆ ತಾಯಿ ಆಸ್ಪತ್ರೆಯಲ್ಲಿದ್ದಾಗ ಬಿಲ್‌ ಕಟ್ಟಲು ರವಿಚಂದ್ರನ್‌ ಹಾಗೂ ಅವರ ತಂದೆ ವೀರಸ್ವಾಮಿ ಅವರು ಮಾಡಿದ ಸಹಾಯವನ್ನು ನಟಿ ಖುಷ್ಬೂ ಸುಂದರ್‌ ಸ್ಮರಿಸಿದ್ದಾರೆ. ನಟಿ ಖುಷ್ಬೂ ಸುಂದರ್ ಅವರನ್ನು ರವಿಚಂದ್ರನ್ ಹಾಗೂ ತಂದೆ ವೀರಸ್ವಾಮಿ ಅವರೇ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದರು.

Water Crisis: ಕೃಷ್ಣಾ, ಭೀಮಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ನೀರು ಬಿಡುವಂತೆ ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

Water Crisis: ರಾಜ್ಯದ ಜಲಾಶಯಗಳಲ್ಲಿರುವ ನೀರು, ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಹೀಗಾಗಿ ವಾರ್ಣಾ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

Karnataka Weather: ಆರೆಂಜ್‌ ಅಲರ್ಟ್;‌ ಇಂದು, ನಾಳೆ ರಾಜ್ಯದ ಉತ್ತರ ಒಳನಾಡಿನಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ!

ಇಂದು, ನಾಳೆ ಉತ್ತರ ಒಳನಾಡಿನಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ!

Karnataka Weather: ಕಲಬುರಗಿಯಲ್ಲಿ ಸೋಮವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 40.6 ಡಿ.ಸೆ ದಾಖಲಾಗಿದೆ. ಇನ್ನು ಏ.7ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ.

CN Ashwath Narayan: ರಾಜ್ಯದಲ್ಲಿ ವ್ಯವಸ್ಥಿತ ಸ್ಮಾರ್ಟ್ ಮೀಟರ್ ಹಗರಣ; ಕೇಂದ್ರದ ಪ್ರಮುಖ ನಿಯಮಾವಳಿಗಳ ಉಲ್ಲಂಘನೆ: ಅಶ್ವತ್ಥ ನಾರಾಯಣ್ ಆರೋಪ

ರಾಜ್ಯದಲ್ಲಿ ವ್ಯವಸ್ಥಿತ ಸ್ಮಾರ್ಟ್ ಮೀಟರ್ ಹಗರಣ: ಅಶ್ವತ್ಥ ನಾರಾಯಣ್ ಆರೋಪ

CN Ashwath Narayan: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಹಗರಣ ವ್ಯವಸ್ಥಿತವಾಗಿ ನಡೆದಿದೆ. ಸರ್ಕಾರವು ಗ್ರಾಹಕರ ಜೇಬಿನಿಂದ ಹಣ ಲೂಟಿ ಮಾಡಲು ಮುಂದಾಗಿದೆ. ಇದರಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಸ್ವಾರ್ಥಕ್ಕಾಗಿ, ಲಾಭಕ್ಕಾಗಿ ಸ್ಮಾರ್ಟ್ ಮೀಟರ್ ಅಳವಡಿಸಲು ಮುಂದಾಗಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bengaluru Murder: ಪತ್ನಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿದ್ದ ಕೇಸ್‌; ಕೊಲೆಗೆ ಕಾರಣ ಬಿಚ್ಚಿಟ್ಟ ಆರೋಪಿಯ ತಂದೆ!

ಬೆಂಗಳೂರಿನಲ್ಲಿ ಪತ್ನಿ ಕೊಲೆ; ಕಾರಣ ಬಿಚ್ಚಿಟ್ಟ ಆರೋಪಿಯ ತಂದೆ!

Bengaluru Murder: ಬೆಂಗಳೂರಿನಲ್ಲಿ ಗೌರಿ ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಮಹಾರಾಷ್ಟ್ರದ ಪುಣೆಯಿಂದ ಆರೋಪಿ ರಾಕೇಶ್‌ನನ್ನು ಕರೆತಂದು, ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿತ್ತು. ಆರೋಪಿ ರಾಕೇಶ್‌ಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

DK Shivakumar: ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ʼಭಾರತ ರತ್ನʼ ನೀಡಲು ಕೇಂದ್ರ ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಮನವಿ

ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಡಿಕೆಶಿ ಮನವಿ

DK Shivakumar: ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ʼಭಾರತ ರತ್ನʼ ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Honey Trap Case: ಹೀನ ಕೃತ್ಯ ಮಾಡುವವರು ರಾಜಕೀಯದಲ್ಲಿ ಇರಬಾರದು: ಸಚಿವ ಕೆ.ಎನ್‌. ರಾಜಣ್ಣ

ಹೀನ ಕೃತ್ಯ ಮಾಡುವವರು ರಾಜಕೀಯದಲ್ಲಿ ಇರಬಾರದು: ಸಚಿವ ಕೆ.ಎನ್‌. ರಾಜಣ್ಣ

Honey Trap Case: ಹನಿ ಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆ ಆಗುತ್ತಿದೆ. ಯಾವ ಸಂಸ್ಥೆಯಿಂದ ತನಿಖೆ ಮಾಡ್ತಾರೋ ಮಾಡಲಿ. ಎಸ್.ಐ.ಟಿಯಿಂದ ಮಾಡ್ತಾರೋ, ಮತ್ತೊಂದು ಮಾಡ್ತಾರೋ‌ ಮಾಡಲಿ. ಅದು ಗೃಹ ಮಂತ್ರಿಗಳಿಗೆ, ಸಿಎಂಗೆ ಬಿಟ್ಟ ವಿಚಾರ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

Forest Movie: 50 ದಿನ ಪೂರೈಸಿ ಶತದಿನೋತ್ಸವದತ್ತ ಸಾಗಿದ ʼಫಾರೆಸ್ಟ್ʼ ಚಿತ್ರ

50 ದಿನ ಪೂರೈಸಿ ಶತದಿನೋತ್ಸವದತ್ತ ಸಾಗಿದ ʼಫಾರೆಸ್ಟ್ʼ ಚಿತ್ರ

Forest Movie: ಅಡ್ವೆಂಚರ್ಸ್ ಕಾಮಿಡಿ ಕಥಾಹಂದರವುಳ್ಳ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿಸ್ಟಾರರ್ ʼಫಾರೆಸ್ಟ್ʼ ಚಿತ್ರ ಯಶಸ್ವಿ 50 ದಿನ ಪೂರೈಸಿ ಶತದಿನೋತ್ಸವದತ್ತ ಸಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

BY Vijayendra: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿಯಿಂದ 2 ಹಂತದ ಹೋರಾಟ: ವಿಜಯೇಂದ್ರ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ 2 ಹಂತದ ಹೋರಾಟ: ವಿಜಯೇಂದ್ರ

BY Vijayendra: ಬೆಲೆ ಏರಿಕೆ ಸೇರಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಏ.2ರಂದು ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Road Accident: ಬೈಕ್‌ ಅಪಘಾತ, ಹಬ್ಬಕ್ಕೆ ಬಟ್ಟೆ ಖರೀದಿಸಿ ಮರಳುತ್ತಿದ್ದ ಇಬ್ಬರು ಬಲಿ

ಬೈಕ್‌ ಅಪಘಾತ, ಹಬ್ಬಕ್ಕೆ ಬಟ್ಟೆ ಖರೀದಿಸಿ ಮರಳುತ್ತಿದ್ದ ಇಬ್ಬರು ಬಲಿ

ಇಬ್ಬರೂ ಬಿಇಎಲ್‌ನ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ ಶಾಪಿಂಗ್‌ಗೆ ಹೋದವರು ನಸುಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ. ಮೃತರು ಅಸ್ಸಾಂ ಹಾಗೂ ಮೇಘಾಲಯದವರು.

Second PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ದಿನಗಣನೆ, ಇಲ್ಲಿ ವೀಕ್ಷಿಸಿ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ದಿನಗಣನೆ, ಇಲ್ಲಿ ವೀಕ್ಷಿಸಿ

2nd PUC Result: ಕಳೆದ ವರ್ಷ ಸೆಕೆಂಡ್ ಪಿಯು ಫಲಿತಾಂಶವನ್ನು ಏಪ್ರಿಲ್ 10ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷವೂ ಸರಿಸುಮಾರು ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಸದ್ಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ.

Kalaghatta Movie: ರಾಯರ ಸನ್ನಿಧಾನದಲ್ಲಿ ಯುಗಾದಿಯಂದು ಬಿಡುಗಡೆಯಾಯಿತು ʼಕಾಲಘಟ್ಟʼ ಚಿತ್ರದ ಮೊದಲ ಪೋಸ್ಟರ್

ಕೆ. ಪ್ರಕಾಶ್ ಅಂಬಳೆ ನಿರ್ದೇಶನದ ʼಕಾಲಘಟ್ಟʼ ಚಿತ್ರದ ಪೋಸ್ಟರ್ ರಿಲೀಸ್‌

Kalaghatta Movie: ಕೆ. ಪ್ರಕಾಶ್ ಅಂಬಳೆ ನಿರ್ದೇಶನದ ʼಕಾಲಘಟ್ಟʼ ಚಿತ್ರದ ಮೊದಲ ಪೋಸ್ಟರ್ ಮಂತ್ರಾಲಯದ ರಾಯರ ಸನ್ನಿಧಾನದಲ್ಲಿ ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಯಿತು. ʼಕಾಲಘಟ್ಟʼ ಇದು ಎರಡು ʼಕಾಲಘಟ್ಟʼ ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಈ ಕುರಿತ ವಿವರ ಇಲ್ಲಿದೆ.

Murder Conspiracy: ರಾಜೇಂದ್ರ ಕೊಲೆ ಯತ್ನ ಪ್ರಕರಣ; ಆರೋಪಿ ಗುಂಡನ ಪ್ರೇಯಸಿ ಪೊಲೀಸರ ವಶಕ್ಕೆ

ರಾಜೇಂದ್ರ ಕೊಲೆ ಯತ್ನ ಪ್ರಕರಣ; ಆರೋಪಿ ಗುಂಡನ ಪ್ರೇಯಸಿ ಪೊಲೀಸರ ವಶಕ್ಕೆ

Murder Conspiracy: ರಾಜೇಂದ್ರ ನೀಡಿದ ದೂರು ಆಧರಿಸಿ ಪುಷ್ಪಾ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಆರೋಪಿ ಗುಂಡನ ಲವರ್ ಯಶೋಧಾಳನ್ನು ಖಾಕಿ ವಶಕ್ಕೆ ಪಡೆದುಕೊಂಡಿದೆ. ರಾಜೇಂದ್ರ ರಾಜಣ್ಣ ಅವರ ಹತ್ಯೆಗೆ ಸಂಚು ರೂಪಿಸಿದ ಸಂಬಂಧ ಸ್ಫೋಟಕ ಆಡಿಯೊ ಸೋಮವಾರ ವೈರಲ್‌ ಆಗಿತ್ತು. ಇದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RCB vs GT: ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯ; ಈ ಮಾರ್ಗದ ಸಂಚಾರ ನಿಷೇಧ

ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯ; ಈ ಮಾರ್ಗದ ಸಂಚಾರ ನಿಷೇಧ

Bangalore Traffic Advisory: ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಜನರು, ತಮ್ಮ ವಾಹನಗಳನ್ನು ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ, ಯು.ಬಿ ಸಿಟಿ, ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗ ಹಾಗೂ ಕಿಂಗ್ಸ್ ರಸ್ತೆಯಲ್ಲಿ ನಿಲ್ಲಿಸಬಹುದು. ಜನರು, ಮೆಟ್ರೊ ಹಾಗೂ ಬಸ್‌ ಬಳಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

1st PUC result: ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಹೀಗೆ ವೀಕ್ಷಿಸಿ

ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಹೀಗೆ ವೀಕ್ಷಿಸಿ

ವಿದ್ಯಾರ್ಥಿಗಳು ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2025 ಅನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಫಲಿತಾಂಶಗಳು ಅನೇಕ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2025 ಅನ್ನು ವೀಕ್ಷಿಸಲು ಮತ್ತು ಡೌನ್ಲೋಡ್ ಮಾಡಲು ನೇರ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

Gold Price Today: ಹಬ್ಬ ಮುಗಿಯುತ್ತಿದ್ದಂತೆ ಗಗನಕ್ಕೇರಿದ ಚಿನ್ನದ ದರ; ಗ್ರಾಹಕರಿಗೆ ಭಾರೀ ಶಾಕ್‌!

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 85ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ತಲಾ 93 ರೂ. ಏರಿಕೆ ಆಗಿದ್ದು, ಚಿನ್ನದ ದರ 8,510 ರೂ. ಮತ್ತು 9,284 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 68,080 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 85,100 ರೂ. ಮತ್ತು 100 ಗ್ರಾಂಗೆ 8,35,900 ರೂ. ನೀಡಬೇಕಾಗುತ್ತದೆ.

‌Murder Case: ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಮರ್ಡರ್

ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಮರ್ಡರ್

ಕೊಲೆಯಾದ ಯುವಕನನ್ನು ನಿಖಿಲ್ ಎಂದು ಗುರುತಿಸಲಾಗಿದ್ದು, ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕೃತ್ಯದ ಹಿಂದೆ ಪ್ರೇಮ ಪ್ರಕರಣ, ಹಳೆ ದ್ವೇಷದ ಹಿನ್ನೆಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸ್ಥಳದಲ್ಲಿರುವ ಸಿಸಿಟಿವಿ ಪೂಟೇಜ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

DK Shivakumar: ಕೇಂದ್ರ ಬೆಂಬಲ ನೀಡಿದರೆ ಕರ್ನಾಟಕ ಬಲಿಷ್ಠ ರಾಜ್ಯವಾಗಲಿದೆ- ಡಿಕೆ ಶಿವಕುಮಾರ್

ರಾಜ್ಯದ ಅಭಿವೃದ್ಧಿಗೆ ಕೈ ಜೋಡಿಸಿ; ಕೇಂದ್ರದ ಬಳಿ ಸಹಾಯಹಸ್ತ ಕೇಳಿದ ಡಿಕೆಶಿ

DK Shivakumar: ಕೇಂದ್ರ ಸರ್ಕಾರದಿಂದ ಸೀಮಿತ ಬೆಂಬಲ ದೊರಕಿದ್ದರೂ ಸಹ, ಕರ್ನಾಟಕವು ಕೈಗಾರಿಕಾ ಜಾಗತೀಕರಣ, ನವೋದ್ಯಮದ ಹೂಡಿಕೆಗಳು ಮತ್ತು ಆರ್ಥಿಕ ಬೆಳವಣಿಗೆಯ ಪ್ರಮುಖ ತಾಣವಾಗಿ ಉಳಿದಿದೆ ಎಂದು ಟೈಮ್ಸ್ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

Honey Trap Case: ಕಿಸ್‌ ಕೊಟ್ಟು ‌ಹನಿಟ್ರ್ಯಾಪ್‌ ಮಾಡಿದ ‌ಪ್ರಿಸ್ಕೂಲ್ ಮಿಸ್! ಬ್ಲ್ಯಾಕ್‌ಮೇಲ್‌ ಗ್ಯಾಂಗ್‌ ಸೆರೆ

ಕಿಸ್‌ ಕೊಟ್ಟು ‌ಹನಿಟ್ರ್ಯಾಪ್‌ ಮಾಡಿದ ಮಿಸ್! ಬ್ಲ್ಯಾಕ್‌ಮೇಲ್‌ ತಂಡ ಸೆರೆ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಎಸಗಿದ ಶಿಕ್ಷಕಿ. ಈಕೆ ಪ್ರಿಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, ಬೆದರಿಕೆ ಒಡ್ಡಿ ಒಂದೂವರೆ ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದಾಳೆ.

PM Narendra Modi: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಇಂದು, ಪ್ರಧಾನಿಯಿಂದ ಕನ್ನಡದಲ್ಲಿ ನಮನ

ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಇಂದು, ಪ್ರಧಾನಿಯಿಂದ ಕನ್ನಡದಲ್ಲಿ ನಮನ

ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ನಮನಗಳು. ಕಾರುಣ್ಯ ಮತ್ತು ದಣಿವರಿಯದ ಸೇವೆಯ ದಾರಿದೀಪವೆಂದು ಅವರನ್ನು ಸ್ಮರಿಸಲಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆನೆದುಕೊಂಡಿದ್ದಾರೆ.