ದರ್ಶನ್ಗೆ ಗಲ್ಲು ಶಿಕ್ಷೆ ಆಗಲೇಬೇಕು; ಕೋರ್ಟ್ಗೆ ಅಪರಿಚಿತನಿಂದ ಅರ್ಜಿ!
Renukaswamy murder case: ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ನಲ್ಲಿ ಬುಧವಾರ ನಡೆಯುತ್ತಿದ್ದಾಗ, ಮಧ್ಯ ಪ್ರವೇಶಿಸಿದ ಅಪರಿಚಿತ ವ್ಯಕ್ತಿ, ದರ್ಶನ್ ಸೇರಿ ಪ್ರಕರಣದಲ್ಲಿ ಭಾಗಿಯಾಗಿರುವ 17 ಜನರಿಗೂ ಮರಣದಂಡನೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ, ಅರ್ಜಿಯನ್ನು ನ್ಯಾಯಾಧೀಶರಿಗೆ ನೀಡಲು ಪ್ರಯತ್ನಿಸಿದ್ದಾನೆ.