ಬೆಳಗಾವಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆ ಸಾವು
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆಗಳು ಸಾವನ್ನಪ್ಪಿವೆ. ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ. ಜಮೀನಿನ ಬೇಲಿಗೆ ಅಕ್ರಮವಾಗಿ ಮನೆಯಿಂದ ವಿದ್ಯುತ್ ಸಂಪರ್ಕ ನೀಡಿದ್ದ ಆರೋಪದಲ್ಲಿ ರೈತ ಗಣಪತಿ ಸಾತೇರಿ ಗುರವ್ ಅವರನ್ನು ಅರಣ್ಯ ಇಲಾಖೆ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.