ಲಂಚ ಕೇಳಿದ ಆರ್‌ಓ ವಿರುದ್ಧ ಕ್ರಮಕ್ಕೆ ಡಿ.ಕೆ. ಶಿವಕುಮಾರ್ ಸೂಚನೆ
Bengaluru Nadige Abhiyana: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್‌ಓ ಬಸವರಾಜ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕೆ.ಆರ್. ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್‌ನಲ್ಲಿ ಶನಿವಾರ ʼಬೆಂಗಳೂರು ನಡಿಗೆʼ ಅಭಿಯಾನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಅವರು ಸೂಚನೆ ನೀಡಿದರು.