ಸಂಸತ್‌ನಲ್ಲೇ ವಕ್ಫ್ ತಿದ್ದುಪಡಿ ಮಸೂದೆ ಪ್ರತಿ ಹರಿದ ಓವೈಸಿ
Asaduddin Owaisi: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರು, ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಲೋಕಸಭೆಯಲ್ಲಿ ಮಸೂದೆಯ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿತು. ಮಸೂದೆ ಪರವಾಗಿ 288 ಮತ್ತು ವಿರೋಧವಾಗಿ 232 ಮತಗಳು ಬಿದ್ದವು.