ಬೆಂಗಳೂರಿನಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮ
ಪಾಸ್‌ಪೋರ್ಟ್ ಪರಿಶೀಲನೆಗೆ ವೇಳೆ ಬಾಡಿ ವೋರ್ನ್ ಕ್ಯಾಮೆರಾ ಕಡ್ಡಾಯವಾಗಿರಬೇಕು. ಪಾಸ್‌ಪೋರ್ಟ್ ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಸಬಾರದು. ಬದಲಿಗೆ ಅಧಿಕಾರಿಗಳು ಅರ್ಜಿದಾರರು ನೀಡಿರುವ ವಿಳಾಸಕ್ಕೆ ಕಡ್ಡಾಯವಾಗಿ ಭೇಟಿ ನೀಡಿ, ನೆರೆಹೊರೆಯವರಿಂದ ಮಾಹಿತಿ ಸಂಗ್ರಹಿಸಬೇಕು. ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮೊದಲು ಎಸ್‌ಎಂಎಸ್ ಅಥವಾ ಕರೆ ಮಾಡುವ ಮೂಲಕ ಮಾಹಿತಿ ನೀಡಬೇಕು.