ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರರು
ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ ಮತ್ತು ಮಕ್ಕಳ ನಡುವೆ ತೀವ್ರ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರರು ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.