ಸಿಇಟಿ 2025 ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಕೆಇಎ
CET 2025: 2025ನೇ ಸಾಲಿನ ಸಿಇಟಿ ಅರ್ಜಿಯಲ್ಲಿ ಮೀಸಲಾತಿ, ವಿಶೇಷ ಪ್ರವರ್ಗ, ಶೈಕ್ಷಣಿಕ ವಿವರಗಳು, ಕ್ಲಾಸ್ ಕೋಡ್ ಇನ್ನಿತರ ಯಾವುದೇ ಮಾಹಿತಿ ತಪ್ಪಾಗಿದ್ದರೆ ಅದನ್ನು ತಿದ್ದುಪಡಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.
Mithya Movie: ನಟ ರಕ್ಷಿತ್ ಶೆಟ್ಟಿ ನಿರ್ಮಾಣದ, ಸುಮಂತ್ ಭಟ್ ನಿರ್ದೇಶನದ ʼಮಿಥ್ಯʼ ಚಿತ್ರ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್‌ನಲ್ಲಿ ನೋಡಲು ಲಭ್ಯವಿದೆ. ಚಿತ್ರದಲ್ಲಿ ಮೂರು ಮುಖ್ಯ ಪಾತ್ರಗಳಿವೆ. ಮಾಸ್ಟರ್ ಅತೀಶ್ ಎಸ್. ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
CET 2025: ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ, ವಿಚಾರಣೆ ಕೈಗೊಳ್ಳಬೇಕು. ಹಾಗೆಯೇ ಪರೀಕ್ಷೆಯಿಂದ ವಂಚಿತನಾಗಿರುವ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಬರೆಯಲು ಸೂಕ್ತ ಅವಕಾಶ ಮಾಡಿಕೊಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧ ಮಂಡಳಿ ಮನವಿ ಮಾಡಿದೆ.
ಮುತ್ತಪ್ಪ ರೈ ಅವರ ₹2000 ಕೋಟಿ ಆಸ್ತಿಗೆ ಸಂಬಂಧಿಸಿದ ವಿವಾದದಿಂದ ರಿಕ್ಕಿ ರೈ ಕೊಲೆಗೆ ಯತ್ನ ನಡೆದಿರಬಹುದು ಎಂಬ ಅನುಮಾನವೂ ಇದೆ. ಮುತ್ತಪ್ಪ ರೈ ಬೆಂಗಳೂರು, ಗೋವಾ, ಮೈಸೂರು, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ವ್ಯಾಪಕ ಬ್ಯುಸಿನೆಸ್ ಹೊಂದಿದ್ದರು. ಈಗ ಈ ಬ್ಯುಸಿನೆಸ್ ಅನ್ನು ರಿಕ್ಕಿ ರೈ ನಿರ್ವಹಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ (ಏ. 18) 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 8,945 ರೂ.ಗೆ ತಲುಪಿತ್ತು. ಇತ್ತ 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಹೆಚ್ಚಾಗಿದ್ದು, ಪ್ರಸ್ತುತ 9,758 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,560 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,450 ರೂ. ಮತ್ತು 100 ಗ್ರಾಂಗೆ 8,94,500 ರೂ. ನೀಡಬೇಕಾಗುತ್ತದೆ.
ರಾಯಚೂರು ಜಿಲ್ಲೆಯು ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಗೆ ಸೀಮಿತ ಸೌಕರ್ಯ ಹೊಂದಿ ದ್ದು, ಈ ನಿಟ್ಟಿನಲ್ಲಿ ಕೊರತೆಯನ್ನು ಎದುರಿಸುತ್ತಿದೆ. ಈ ಕೊರತೆಯನ್ನು ನೀಗಿಸಲು ಟಿಕೆಎಂ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ವಾತಾವರಣವನ್ನು ಉತ್ತಮಗೊಳಿಸುವ ಮತ್ತು ತಾಯಿ ಹಾಗೂ ಮಗುವಿಗೆ ಉತ್ತಮ ಆರೋಗ್ಯ ಸೇವೆ ದೊರಕಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಕೈಗೊಂಡಿದೆ.
ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಮಾಡಿದ್ದು ಯಾರು, ಯಾಕೆ ಎನ್ನುವ ಪ್ರಶ್ನೆ ಮೂಡಿದೆ. ರಿಕ್ಕಿ ರೈ ಸಾಕಷ್ಟು ರಿಯಲ್ ಎಸ್ಟೇಟ್ ಡೀಲಿಂಗ್ ನಡೆಸುತ್ತಿದ್ದು, ಸಂಚಿನ ಹಿಂದೆ ರಿಯಲ್ ಎಸ್ಟೇಟ್ ಮಾಫಿಯಾ ಇರುವ ಶಂಕೆ ಮೂಡಿದೆ. ಜಮೀನು ವಿಚಾರಕ್ಕೆ ಈ ಹಿಂದೆ ಕೆಲವು ವಿವಾದಗಳಾಗಿದ್ದವು. ಪ್ರತಿಸ್ಪರ್ಧಿಗಳ ಮೇಲೂ ಶಂಕೆ ಇದೆ.
ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ತರುವ ವಿಚಾರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಬರೆದ ಪತ್ರಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯ ಎದುರಿಸದಂತೆ ಆದಷ್ಟು ಬೇಗ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ.
Fancy Saree Fashion: ಜಮಾನ ಬದಲಾದಂತೆ ಫ್ಯಾನ್ಸಿ ಸೀರೆಗಳು ಬದಲಾಗಿವೆ. ಆಯಾ ಜನರೇಷನ್‌ನ ಹೆಣ್ಣು ಮಕ್ಕಳಿಗೆ ಇಷ್ಟವಾಗುವಂತಹ ವೈವಿಧ್ಯಮಯ ಡಿಸೈನ್‌ನಲ್ಲಿ ಸೀರೆ ಲೋಕಕ್ಕೆ ಲಗ್ಗೆ ಇಟ್ಟಿವೆ. ಇಂದು ಯಾವ್ಯಾವ ಬಗೆಯವು ಬಂದಿವೆ? ಈ ಬಗ್ಗೆ ಸೀರೆ ಎಕ್ಸ್‌ಪರ್ಟ್‌ಗಳು ಹೇಳುವುದೇನು? ಈ ಎಲ್ಲದರ ಕುರಿತಂತೆ ಇಲ್ಲಿದೆ ಡಿಟೇಲ್ಸ್.
ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ರಚಿತ್ ಮರಣ ಹೊಂದಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈ ಮರಣ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.
Mens Beauty Salons: ಇತ್ತೀಚೆಗೆ ಪುರುಷರಲ್ಲಿ ಸೌಂದರ್ಯ ಪ್ರಜ್ಞೆ ಹೆಚ್ಚಾಗುತ್ತಿರುವಂತೆ, ದೊಡ್ಡ ದೊಡ್ಡ ನಗರಗಳಲ್ಲಿ ಅದರಲ್ಲೂ ಉದ್ಯಾನನಗರಿಯಲ್ಲಿ, ಮೆನ್ಸ್ ಬ್ಯೂಟಿ ಸಲೂನ್‌ಗಳು ಹೆಚ್ಚಾಗುತ್ತಿವೆ. ಅವುಗಳಲ್ಲಿ, ಯಾವ್ಯಾವ ಬಗೆಯ ಬ್ಯೂಟಿ ಚಿಕಿತ್ಸೆಗಳು & ಮೇಕೋವರ್‌ಗಳು ಟ್ರೆಂಡಿಯಾಗಿವೆ? ಇಲ್ಲಿದೆ ಸಂಕ್ಷಿಪ್ತ ವರದಿ.
ದಾಳಿ ವೇಳೆ ರಿಕ್ಕಿ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ತಕ್ಷಣವೇ ಆತನನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಧ್ಯರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ.
ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್,ಕಾಮಿಡಿ ಕಿಲಾಡಿಗಳು, ಡಾನ್ಸ್ ಕರ್ನಾಟಕ ಡಾನ್ಸ್, ಸರಿಗಮಪ, ಮಹಾನಟಿ ಸೀಸನ್-1 ಮೂಲಕ ಈಗಾಗಲೆ ಸಾಕಷ್ಟು ನಟ ನಟಿ ಯರು, ಗಾಯಕ ಗಾಯಕಿಯರು ಹಾಗು ಕೊರಿಯೋಗ್ರಾಫರ್‌ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ಼ ಕನ್ನಡ ವಾಹಿನಿ ಇದೀಗ ಮಹಾನಟಿ ಸೀಸನ್-2 ನ ನಿಮಗಾಗಿ ಹೊತ್ತು ತರುತ್ತಿದೆ.
ನೇಹಾ ಹಿರೇಮಠ ಹತ್ಯೆಗೆ ಏಪ್ರಿಲ್ 18ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ, ನೇಹಾ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ, ಶ್ರೀರಾಮ ಸೇನೆ ವತಿಯಿಂದ ಹುಬ್ಬಳ್ಳಿಯ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಶಿವಕೃಷ್ಣ ಮಂದಿರದಲ್ಲಿ ಸ್ವರಕ್ಷಣೆಗಾಗಿ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಲಾಯಿತು.
Caste Census: ಹವ್ಯಕ ಬ್ರಾಹ್ಮಣರ ಜನಸಂಖ್ಯೆ ಕೇವಲ 85 ಸಾವಿರ ಎಂದು ಜಾತಿ ಸಮೀಕ್ಷೆಯ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ಹಲವಾರು ವರದಿಯ ಮೂಲಕ ಮಹಾಸಭೆಯ ಗಮನಕ್ಕೆ ಬಂದಿದೆ. ಇದು ಸತ್ಯಕ್ಕೆ ದೂರವಾದ ವಿಚಾರವಾಗಿದ್ದು, ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಶ್ರೀ ಅಖಿಲ ಹವ್ಯಕ ಮಹಾಸಭೆಯು ಈ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸುತ್ತದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ತಿಳಿಸಿದ್ದಾರೆ.
CET 2025: ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ವೇಳೇ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಶಿದಾರ ತೆಗೆಸಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬ್ರಾಹ್ಮಣ ಮಹಾಸಭಾದ ಪ್ರಮುಖರು ಮನವಿ ಸಲ್ಲಿಸಿದರು. ಹೀಗಾಗಿ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಪಡೆದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
CET 2025: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಬಲವಂತದಿಂದ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿ, ಅಧಿಕಾರಿಗಳು ಕಳುಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಧಿಕಾರಿ ಅಮಾನತಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.