ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Shamanur Shivashankarappa: ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಶಾಮನೂರು ಶಿವಶಂಕರಪ್ಪ

ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಶಾಮನೂರು ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ ಅವರು ಶಿಕ್ಷಣ ಕ್ಷೇತ್ರದಲ್ಲಿ ಲಕ್ಷಾಂತರ ಮಂದಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ನೀಡಿದ್ದ ಮಹಾನ್ ವ್ಯಕ್ತಿಯಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮನೆಮನೆ ಮಾತಾಗಿದ್ದರು. ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ತುಂಬಲಾಗದ ನಷ್ಟವಾಗಿದೆ

Chintamani News: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಶ್ರೀನಿವಾಸಲು ಈ ಸಂಘವನ್ನು ಪುನಶ್ಚೇತನ ಗೊಳಿಸಿ ಪದಾಧಿಕಾರಿ ಗಳಿಗೆ ಹಸಿರು ಶಾಲು ಹೊದಿಸಿ ಸಂಘಟನೆ ಸದಸ್ಯರನ್ನಾಗಿ ನೇಮಕ ಮಾಡಿ ಜವಾಬ್ದಾರಿ ವಹಿಸಿದರು. ರಾಜ್ಯ ಸರ್ಕಾರ ಕೂಡಲೇ ಕುಡಿಯಲು ಹಾಗೂ ವ್ಯವಸಾಯಕ್ಕೆ ಹೆಚ್ಎನ್ ವ್ಯಾಲಿ ಮತ್ತು ಕೆ ಸಿ ವ್ಯಾಲಿ ನೀರು ಕೆರೆಗಳಿಗೆ ಹರಿಸಬೇಕು, ಮೂರನೇ ಹಂತದ ಶುದ್ಧೀಕರಣ ಗೊಳಿಸಬೇಕು ಮತ್ತು ಎತ್ತಿನಹೊಳೆ ನೀರು, ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಸದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ

Vajral Gowda : ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ 5 ಮೆಡಲ್ ಗಳ ಸಾಧನೆಗೈದ ಮೇಲೂರು ಪ್ರತಿಭೆ ವಜ್ರಲ್ ಗೌಡ

ಪವರ್ ಲಿಫ್ಟಿಂಗ್ 5 ಮೆಡಲ್ ಗಳ ಸಾಧನೆಗೈದ ಮೇಲೂರು ಪ್ರತಿಭೆ

ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುವುದೆಂದರೆ ಕ್ರೀಡಾಪಟುವಿಗೆ ಸಂತೋಷ ತರುತ್ತದೆ. ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ವರ್ಲ್ಡ್ ಚಾಂಪಿಯನ್ಶಿಪ್ ನಲ್ಲಿ ಐದು ಗೋಲ್ಡ್ ಮೆಡಲ್ಸ್ ಸಾಧನೆ ಮಾಡಿದ್ದೇನೆ. ನನ್ನ ಈ ಸಾಧನೆಯಿಂದ ನನ್ನ ತಾಯಿ ಮತ್ತು ಸಹೋದರಿ ಯರ ಅಪಾರವಾದ ಬೆಂಬಲವಿದೆ

Chintamani News: ಚಿಂತಾಮಣಿಯಲ್ಲಿ ಜೆಡಿಎಸ್ ಪಕ್ಷದ ಮುಖಂಡರಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿರವರ ಹುಟ್ಟು ಹಬ್ಬ ಆಚರಣೆ

ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಆನಾಥಾಶ್ರಮದಲ್ಲಿ ಹಣ್ಣು ಹಂಪಲ ವಿತರಣೆ

ಸರಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಗೂ ಆನಾಥಾಶ್ರಮದಲ್ಲಿನ ಆನಾಥ ಮಕ್ಕಳಿಗೆ ಬ್ರೇಡ್ ಹಾಗೂ ಹಣ್ಣು ಹಂಪಲಗಳನ್ನು ವಿತರಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರ ಸ್ವಾಮಿರವರ ಹುಟ್ಟು ಹಬ್ಬವನ್ನು ಚಿಂತಾಮಣಿಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತ ರು ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜೆಕೆ ಕೃಷ್ಣಾರೆಡಿರವರ ಮಾರ್ಗದರ್ಶನದಲ್ಲಿ ಆರ್ಥಪೂರ್ಣವಾಗಿ ಆಚರಣೆ ಮಾಡಿದರು.

ಬಾಡಿಗೆ ತಿದ್ದುಪಡಿ ಮಸೂದೆ 2025ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರಿ ದಂಡ!

ಬಾಡಿಗೆ ಮಸೂದೆಗೆ ತಿದ್ದುಪಡಿ; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರಿ ದಂಡ!

Rent amendment bill: ಬಾಡಿಗೆ ತಿದ್ದುಪಡಿ ವಿಧೇಯಕದಲ್ಲಿ ಬಾಡಿಗೆದಾರರು ಮತ್ತು ಮನೆ ಮಾಲೀಕರ ನಡುವಿನ ವಿವಾದಗಳನ್ನು ಬಗೆಹರಿಸಲು, ಪಾರದರ್ಶಕತೆ ತರಲು ಕೆಲ ತಿದ್ದುಪಡಿ ಮಾಡಲಾಗಿದೆ. ಬಾಡಿಗೆ ಮನೆಗಳಲ್ಲಿ ವಾಸಿಸುವವರು ಮತ್ತು ಮನೆ ಮಾಲೀಕರು ಇಬ್ಬರಿಗೂ ಹೊಸ ನಿಯಮಗಳು ಅನ್ವಯಿಸುತ್ತವೆ.

Fine for No helmet wearing: ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ಮುಟ್ಟಿಸಿದ ಚಿಂತಾಮಣಿ ಪೊಲೀಸರು

6 ಲಕ್ಷಕ್ಕಿಂತ ಹೆಚ್ಚು ದಂಡ ಹಾಕಿರುವ ಚಿಂತಾಮಣಿ ಪೊಲೀಸರು

ಹೆಲ್ಮೆಟ್‌ ಬಳಕೆ ಕಡ್ಡಾಯವಿದ್ದರೂ ಬಳಸದೇ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸಿ ವಾಹನ ಓಡಿಸಲು ಡಿ.12 ರವರೆಗೆ ಅವಧಿ ಕಲ್ಪಿಸಲಾಗಿತ್ತು. ಜಿಲ್ಲೆಯಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಗಡುವು ನೀಡಿದ್ದರು. ಹೆಲ್ಮೆಟ್ ಕಡ್ಡಾಯಕ್ಕೆ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿ ದ್ವಿ ಚಕ್ರವಾಹನ ಸವಾರರಿಗೆ ಬಿಸಿ ಮುಟ್ಟಿಸಿದರು.

Bagepally News: ಶ್ರೀ ಅವಧೂತ ಆದಿನಾರಾಯಣಸ್ವಾಮಿಯವರ 99ನೇ ಅದ್ದೂರಿ ಜಯಂತೋತ್ಸವ

ಶ್ರೀ ಅವಧೂತ ಆದಿನಾರಾಯಣಸ್ವಾಮಿಯವರ 99ನೇ ಅದ್ದೂರಿ ಜಯಂತೋತ್ಸವ

ಬೆಳಗಿನ ಜಾವದಿಂದಲೇ ಅವಧೂತ ಆದಿನಾರಾಯಣಸ್ವಾಮಿ ಅವರ ಸಮಾಧಿ ಬಳಿ ಗಣಪತಿ ಪೂಜೆ, ಗಂಗಾಪೂಜ, ಕಳಶಾರಾಧನೆ, ಯಾಗಮಂಟಪಪೂಜೆ, ಕಂಕಣಧಾರಣೆ, ವಾಸ್ತು ಪೂಜೆ, ಪೂರ್ಣಾ ಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಸಲಾಯಿತು. ಹಾಗು ಸಾವಿರಾರು ಭಕ್ತಾದಿಗಳಿಂದ ಇಡಿ ರಾತ್ರಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

HD Kumaraswamy: ಶಿಡ್ಲಘಟ್ಟದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಎಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ

ಜೆಡಿಎಸ್ ಕಾರ್ಯಕರ್ತರಿಂದ ಎಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ

ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಕಾರ್ಯಕರ್ತರು, ಆಸ್ಪತ್ರೆಯ ಒಳ ಹಾಗೂ ಹೊರರೋಗಿ ಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿ, ಕುಮಾರಣ್ಣ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಕಷ್ಟವನ್ನರಿತು ರೈತರ ಸಾಲ ಮನ್ನಾ ಮಾಡಿದ ಧೀಮಂತ ನಾಯಕ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಮಗೆ ತುಂಬಾ ಹೆಮ್ಮೆಯಾಗಿದೆ. ಅವರು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ ಮೂರನೇ ಬಾರಿ 2028ಕ್ಕೆ ಮುಖ್ಯಮಂತ್ರಿಯಾಗಲಿ ಎಂದು ಹರ್ಷ ವ್ಯಕ್ತ ಪಡಿಸಿದರು

Chikkanayakanahalli News: ಮಹಾಲಕ್ಷ್ಮೀ ಮದ್ದರಲಕ್ಷ್ಮೀ ಕ್ಷೇತ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳ ಭೇಟಿ

ಮದ್ದರಲಕ್ಕಮ್ಮ ಕ್ಷೇತ್ರಕ್ಕೆ ಅಧಿಕಾರಿಗಳ ಭೇಟಿ

ಅಧಿಕಾರಿಗಳ ತಂಡವು ಪ್ರಥಮವಾಗಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿತು. ಪ್ರಸ್ತುತ ಸಮಾಜದಲ್ಲಿ ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮತ್ತು ಶೋಷಣೆಗಳು ಸಂಪೂರ್ಣವಾಗಿ ನಿಲ್ಲಬೇಕು, ಹಾಗು ದೇಶದ ಎಲ್ಲಾ ಮಕ್ಕಳಿಗೆ ಸುರಕ್ಷಿತ ವಾತವಾರಣ ಮತ್ತು ಉತ್ತಮ ಭವಿಷ್ಯ ದೊರೆಯಬೇಕು ಎಂಬ ಸದಾಶಯದಿಂದ ಅಮ್ಮನವರಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಚಿಕ್ಕಮಾಲೂರು ಗ್ರಾಪಂಗೆ ಜಿಪಂ ಸಿಇಒ ಜಿ. ಪ್ರಭು ದಿಢೀರ್‌ ಭೇಟಿ; ಕಡತಗಳಲ್ಲಿ ನ್ಯೂನ್ಯತೆ ಕಂಡು ಸಿಬ್ಬಂದಿಗೆ ತರಾಟೆ

ಚಿಕ್ಕಮಾಲೂರು ಗ್ರಾ.ಪಂಗೆ ಜಿಪಂ ಸಿಇಒ ಜಿ. ಪ್ರಭು ದಿಢೀರ್‌ ಭೇಟಿ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮ ಪಂಚಾಯಿತಿಗೆ ಮಂಗಳವಾರ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಆಕಸ್ಮಿಕ ಭೇಟಿ ನೀಡಿದರು. ಈ ವೇಳೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕಚೇರಿಯಲ್ಲಿ ಇಲ್ಲದೆ ಇರುವುದನ್ನು ಗಮನಿಸಿ, ಕಡತಗಳನ್ನು, ಕ್ರಿಯಾ ಯೋಜನೆಯನ್ನು ವಿವಿಧ ವಹಿಗಳನ್ನು ಖುದ್ದು ಪರಿಶೀಲಿಸಿದರು.

MGNREGA Renaming Row: ಮನರೇಗಾ ಹೆಸರು ಬದಲಿಸಿ ಗಾಂಧೀಜಿಗೆ ಅವಮಾನ: ಪ್ರಧಾನಿ ಮೋದಿ ವಿರುದ್ಧ ಸಿಎಂ ಕಿಡಿ

ಮನರೇಗಾ ಹೆಸರು ಬದಲಿಸಿ ಗಾಂಧೀಜಿಗೆ ಅವಮಾನ: ಸಿಎಂ ಕಿಡಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಹೆಸರು ಬದಲಿಗೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್‌ ಆ್ಯಂಡ್‌ ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G Bill) ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಸೂದೆ ಮಂಡಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಭರ್ತಿ ಮಾಡಿ; ಸಿಎಂಗೆ ತಜ್ಞರ ಸಮಿತಿ ಶಿಫಾರಸು

ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಭರ್ತಿಗೆ ಶಿಫಾರಸು

Kalyana Karnataka: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತರಬೇತಿ ಪಡೆದ ಶಿಕ್ಷಕರ ಲಭ್ಯತೆ ಖಚಿತಪಡಿಸಲು ವರ್ಗಾವಣೆ ನೀತಿಯ ಪರಿಶೀಲನೆ ನಡೆಸುವ ಅಗತ್ಯವಿದೆ. ಮೂಲಭೂತ ಸಾಕ್ಷರತೆ ಮತ್ತು ಗಣಿತಜ್ಞತೆ ಕಾರ್ಯಕ್ರಮದ ಪರಿಣಾಮಕಾರಿ ಮತ್ತು ಫಲಿತಾಂಶಾಧಾರಿತ ಅನುಷ್ಠಾನಕ್ಕೆ ತಂತ್ರ ರೂಪಿಸುವುದು ಸೇರಿ ಹಲವು ಶಿಫಾರಸುಗಳನ್ನು ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ಮಾಡಿದೆ.

WCD Karnataka Recruitment 2025: ತುಮಕೂರು ಜಿಲ್ಲೆಯಲ್ಲಿದೆ ಬರೋಬ್ಬರಿ 946 ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

946 ಅಂಗನವಾಡಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ತುಮಕೂರು ಜಿಲ್ಲೆಯಾದ್ಯಂತ ಉದ್ಯೋಗಾವಕಾಶ ಇದ್ದು, ಖಾಲಿ ಇರುವ 946 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2026ರ ಜನವರಿ 9ರವರೆಗೆ ಕಾಲಾವಕಾಶ ನೀಡಲಾಗಿದ್ದು, ಸರ್ಕಾರಿ ಉದ್ಯೋಗಗಳನ್ನು ಪಡೆಯಬೇಕು ಎಂದು ಇಚ್ಚಿಸುವವರಿಗೆ ಇದೊಂದು ಸುವರ್ಣಕಾಶ.

ರಾಷ್ಟ್ರಪತಿಗಳ ಆಗಮನ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಹೊಸ ದಿಕ್ಸೂಚಿ: ಎಚ್.ಡಿ. ಕುಮಾರಸ್ವಾಮಿ

ರಾಷ್ಟ್ರಪತಿಗಳ ಆಗಮನ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಹೊಸ ದಿಕ್ಸೂಚಿ: ಎಚ್‌ಡಿಕೆ

HD Kumaraswamy: ಮಳವಳ್ಳಿಯಲ್ಲಿ ನಡೆದ ಶ್ರೀ ಸುತ್ತೂರು ಮಹಾಸಂಸ್ಥಾನದ ಸಂಸ್ಥಾಪಕರಾದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇ ಜಯಂತಿ ಮಹೋತ್ಸವದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿದರು. ತಮ್ಮ ಬಿಡುವಿಲ್ಲದ, ನಿರಂತರ ಕಾರ್ಯಕ್ರಮಗಳ ನಡುವೆಯೂ ನಮ್ಮ ಮನವಿಗೆ ಓಗೊಟ್ಟು ಪರಮಪೂಜ್ಯರ ಜಯಂತಿ ಉತ್ಸವಕ್ಕೆ ಆಗಮಿಸಿರುವ ರಾಷ್ಟ್ರಪತಿಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ಕೇಂದ್ರ ಸಚಿವರು ಹೇಳಿದರು.

Laxmi Hebbalkar: ಪಾಲಕರ ಕನಸನ್ನು ನನಸಾಗಿಸುವುದು ಮಕ್ಕಳ ಕರ್ತವ್ಯ: ಲಕ್ಷ್ಮಿ ಹೆಬ್ಬಾಳ್ಕರ್

ಪಾಲಕರ ಕನಸನ್ನು ನನಸಾಗಿಸುವುದು ಮಕ್ಕಳ ಕರ್ತವ್ಯ: ಹೆಬ್ಬಾಳ್ಕರ್

ಮಕ್ಕಳ ವಿದ್ಯಾಭ್ಯಾಸ ಕುಂಠಿತ ಆಗಬಾರದು ಅನ್ನೋದೆ ನನ್ನ ಹಾಗೂ ಇಲಾಖೆಯ ಉದ್ದೇಶ. ಯಾವುದೇ ಮಾರ್ಗದರ್ಶನ ಬೇಕಾದರೆ ನಮ್ಮ ಇಲಾಖೆ ಸದಾ‌ ನೀಡುತ್ತದೆ. ಬಾಲ್ಯದ ಜೀವನ ಒಳ್ಳೆಯ ಜೀವನ, ಎಲ್ಲರೂ ತಮ್ಮ ಜೀವನವನ್ನು ಹಸನಾಗಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2,800 ರೈತರು ಆತ್ಮಹತ್ಯೆ

ರೈತರ ಆತ್ಮಹತ್ಯೆ ಪ್ರಕರಣ: ರಾಜ್ಯದಲ್ಲಿ ಇಳಿಮುಖ

ರಾಜ್ಯದಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಿಂದ ಆತ್ಮಹತ್ಯೆ ಪ್ರಕರಣ ಇಳಿಮುಖವಾಗುತ್ತಿದೆ. ಇದು ರಾಜ್ಯ ಸರ್ಕಾರದ ಯೋಜನೆಗಳು ಜನರನ್ನು ತಲುಪುತ್ತಿದೆ ಎಂಬುದಕ್ಕೆ ನಿದರ್ಶನವಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸದನಕ್ಕೆ ತಿಳಿಸಿದ್ದಾರೆ.

Online engagement: ವರನಿಗೆ ಸಿಗಲಿಲ್ಲ ರಜೆ; ಉಡುಪಿಯಲ್ಲಿ ಆನ್‌ಲೈನ್‌ನಲ್ಲೇ ನಡೆಯಿತು ನಿಶ್ಚಿತಾರ್ಥ!

ವರನಿಗೆ ಸಿಗಲಿಲ್ಲ ರಜೆ; ಉಡುಪಿಯಲ್ಲಿ ಆನ್‌ಲೈನ್‌ನಲ್ಲೇ ನಿಶ್ಚಿತಾರ್ಥ!

ಉಡುಪಿಯ ಸರಸ್ವತಿ ಸಭಾಭವನದಲ್ಲಿ ನಿಶ್ಚಿತಾರ್ಥ ನಡೆದಿದೆ. ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಯುವಕ ಹಾಗೂ ಉಡುಪಿಯ ಯುವತಿ ಎಂಗೇಜ್‌ಮೆಂಟ್‌ ಬ್ರಾಹ್ಮಣ ಸಂಪ್ರದಾಯದಂತೆ ಆನ್‌ಲೈನ್‌ ಮೂಲಕ ನೆರವೇರಿದೆ. ವರ ಕೆನಡಾದಲ್ಲೇ ಇದ್ದು, ವಿಡಿಯೋ ಕಾಲ್‌ ಮೂಲಕ ನಿಶ್ಚಿತಾರ್ಥದಲ್ಲಿ ಭಾಗಿಯಾಗಿದ್ದಾರೆ.

ಪ್ರತ್ಯೇಕ ಕಂಪನಿ ಆದ ನಂತರ ತನ್ನ ಹೊಸ ಬ್ರ್ಯಾಂಡ್ ಗುರುತನ್ನು ಅನಾವರಣಗೊಳಿಸಿದ ಬ್ಲೂಸ್ಪ್ರಿಂಗ್

ಹೊಸ ಬ್ರ್ಯಾಂಡ್ ಗುರುತನ್ನು ಅನಾವರಣಗೊಳಿಸಿದ ಬ್ಲೂಸ್ಪ್ರಿಂಗ್

ಬ್ಲೂಸ್ಪ್ರಿಂಗ್ ಏಕತೆ, ಮಹತ್ವಾಕಾಂಕ್ಷೆ ಮತ್ತು ಪ್ರಗತಿಯ ತತ್ವಗಳ ಮೇಲೆ ಆಧಾರಿತವಾಗಿರುವ ಹೊಸ ಬ್ರ್ಯಾಂಡ್ ಗುರುತು, ಕಂಪನಿಯ ತಜ್ಞ ಸಾಮರ್ಥ್ಯಗಳು ಮತ್ತು ಹಳೆಯ ಬ್ರ್ಯಾಂಡ್‌ಗಳನ್ನು ಒಂದೇ ಸಮಗ್ರ ವೇದಿಕೆಯಡಿ ಒಟ್ಟುಗೂಡಿಸುತ್ತದೆ.ಹೊಸ ದೃಶ್ಯ ಗುರುತು ಹೊಸ ಟ್ಯಾಗ್‌ಲೈನ್ ‘ಮೂಲಸೌಕರ್ಯ.

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು 2ನೇ ತಿದ್ದುಪಡಿ ವಿಧೇಯಕ ಪಾಸ್‌

Karnataka Winter Session: ಗ್ರೇಟರ್ ಬೆಂಗಳೂರು ಆಡಳಿತ (2ನೇ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ಸಲಹೆಯಂತೆ ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ ಎಂದು ತಿಳಿಸಿದ್ದಾರೆ.

Tumkur News: ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ಜಿಲ್ಲಾಧಿಕಾರಿಗಳ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದ್ದು, ಬಾಂಬ್ ಸ್ಫೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿದೆ. ಇ-ಮೇಲ್ ಗಮನಿಸಿದ ಕೂಡಲೇ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಹಾಗೂ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

Karnataka Winter Session: ಕುಣಿಗಲ್‌ಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ: ಸಿಎಂ ಭರವಸೆ

ಕುಣಿಗಲ್‌ಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ: ಸಿಎಂ ಭರವಸೆ

ಮಧುಗಿರಿ ತಾಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ, ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್‌ಸಿ, ಎಸ್‌ಟಿ ಸಮುದಾಯದವರಿದ್ದು, ಕುಣಿಗಲ್‌ನಲ್ಲಿ ಕೇವಲ ಶೇ. 8 ರಷ್ಟು ಮಾತ್ರ ಎಸ್‌ಸಿ-ಎಸ್‌ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಾಲಹಳ್ಳಿ ಅಂಡರ್‌ ಪಾಸ್ ಕಾಮಗಾರಿ; ವಿಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ ಎಂದ ಡಿ.ಕೆ. ಶಿವಕುಮಾರ್

ಜಾಲಹಳ್ಳಿ ಅಂಡರ್‌ ಪಾಸ್ ಕಾಮಗಾರಿ; ವಿಪಕ್ಷ ನಾಯಕರೊಂದಿಗೆ ಸಭೆ ಎಂದ ಡಿಕೆಶಿ

DK Shivakumar: ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಚಿನ್ನಸಂದ್ರ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಐಹೆಚ್ಎಂಓ ಕಚೇರಿ

ಐಹೆಚ್ಎಂಓ ಕಚೇರಿ ಉದ್ಘಾಟನೆ ಹಾಗೂ ಬಡವರಿಗೆ ಕಂಬಳಿ ವಿತರಣೆ

ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಇಂದು ಇಂಟರ್ನ್ಯಾಷನಲ್ ಹೂಮಾನಿಟಿ ರೈಟ್ಸ್ ಅಂಡ್ ಮೀಡಿಯಾ ಆರ್ಗನೈಸೇಶನ್ ಸಂಘಟನೆಯ ಕಚೇರಿ ಉದ್ಘಾಟನೆ ಹಾಗೂ ಬಡವರಿಗೆ ಕಂಬಳಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇನ್ನೂ ಇದೇ ವೇಳೆ ಮೈನಾರಿಟಿ ರಾಜ್ಯಧ್ಯಕ್ಷರಾಗಿ ರೋಷನ್ ಬಾಷಾ, ಮೈನಾರಿಟಿ ರಾಜ್ಯ ಉಸ್ತುವಾರಿ ಯಾಗಿ ರಿಯಾಜ್ ರವರನ್ನು ಆಯ್ಕೆ ಮಾಡಲಾಯಿತು.

ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ

ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ

ಡಾ.ಬಾತ್ರಾಸ್ ಎಕ್ಸ್.ಒ.ಡರ್ಮಾ ಎಕ್ಸೊಸೋಮ್ ಗಳ ವಿಜ್ಞಾನದಿಂದ ಸನ್ನದ್ಧವಾಗಿದ್ದು ಅದು ಆಳವಾದ ಜೀವಕೋಶದ ಮಟ್ಟದಲ್ಲಿ ಜೈವಿಕ ಸಂದೇಶವಾಹಕಗಳನ್ನು ಗುರಿಯಾಗಿಸುತ್ತವೆ. ಈ ಕಿರಿದಾದ ಕಣಗಳು ಚರ್ಮದ ಆಳದ ಪದರಗಳಿಗೆ ವಿಸ್ತರಿಸುತ್ತವೆ ಮತ್ತು ನೈಸರ್ಗಿಕ ರಿಪೇರಿ ಮತ್ತು ಪುನಶ್ಚೇತನ ಪ್ರಕ್ರಿಯೆ ಯನ್ನು ಸಕ್ರಿಯಗೊಳಿಸಿ ದೀರ್ಘಕಾಲ ಉಳಿಯುವ ಫಲಿತಾಂಶಗಳನ್ನು ನೀಡುತ್ತವೆ.

Loading...