ಗ್ರೇಟರ್ ಮೈಸೂರು ಆಗಲಿ, ಸಂಸ್ಕೃತಿಗೆ ಧಕ್ಕೆ ಆಗದಿರಲಿ: ಸಿಎಂ ಸಿದ್ದರಾಮಯ್ಯ
Greater Mysuru: ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾ ಬದ್ಧವಾಗಿರಬೇಕು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದಿದ್ದಾರೆ. ಈ ಬಗ್ಗೆ ಅವರು ಎಕ್ಸ್ ಪೋಸ್ಟ್ ಅನ್ನೂ ಹಂಚಿಕೊಂಡಿದ್ದಾರೆ.