ಭರತ್ ರೆಡ್ಡಿ ಮೇಲೂ ಕೇಸ್, ಸತೀಶ್ ರೆಡ್ಡಿ ಗನ್ ಮ್ಯಾನ್‌ಗಳು ನಾಪತ್ತೆ
ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಗನ್ ಮ್ಯಾನ್‌ಗಳ ಐದು ಗನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ ರೆಡ್ಡಿಗೆ ಸಂಬಂಧಿಸಿದ ಎಲ್ಲಾ ನಾಲ್ಕು ಗನ್ ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.