ರಾಮನಗರ : ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟಯೋಟೋ ಕಾರ್ಖಾನೆ ನೌಕರರು ಮತ್ತು ಆಡಳಿತ ಮಂಡಳಿ ನಡುವಿನ ಬಿಕ್ಕಟ್ಟು ಉಲ್ಬಣಗೊಂಡಿದೆ.
ಕಾರ್ಖಾನೆ ಆಡಳಿತ ಮಂಡಳಿಯ ಧೋರಣೆ ವಿರುದ್ಧ ರೊಚ್ಚಿಗೆದ್ದಿರುವ ಕಾರ್ಮಿಕರು ಕಳೆದ ಮೂವತ್ತೈದು ದಿನಗಳಿಂದ ಕೆಲಸ ಸ್ಥಗಿತಗೊಳಿಸಿ, ಹೋರಾಟದ ಹಾದಿ ಹಿಡಿದಿದ್ದಾರೆ. ಬಿಕ್ಕಟ್ಟು ಶಮನಕ್ಕೆ ಮಧ್ಯೆ ಪ್ರವೇಶಿಸಿದ ಸಂಸದ ಡಿ.ಕೆ.ಸುರೇಶ್ ಅವರು ಬುಧ ವಾರ ನಡೆಸಿದ ಮಾತುಕತೆ ವಿಫಲ ಗೊಂಡಿತು. ಈ ಬಗ್ಗೆ ಸುರೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಖಾನೆಯ ಆಡಳಿತ ಮಂಡಳಿಯು ತಮ್ಮ ಮಾತಿಗೆ ಕಿಮ್ಮತ್ತು ನೀಡದಿರುವ ಕಾರಣ ರೊಚ್ಚಿಗೆದ್ದ ಸಂಸದ ಸುರೇಶ್ ಅವರು ಎರಡು ದಿನದ ಗಡುವು ನೀಡಿದ್ದು, ಅಷ್ಟರಲ್ಲಿ ಕಾರ್ಮಿಕರ ಬೇಡಿಕೆ ಈಡೇರಿಸದಿದ್ದಲ್ಲಿ ಖುದ್ದು ತಾವೂ ಹೋರಾಟಕ್ಕೆ ಧುಮುಕುವ ಎಚ್ಚರಿಕೆ ನೀಡಿದ್ದಾರೆ.