Monday, 3rd October 2022

ಟ್ರಕ್ ಬಸ್ಸು ಮೇಲೆ ಹರಿದು 18 ಮಂದಿ ಸಾವು

ಲಕ್ನೊ: ಉತ್ತರ ಪ್ರದೇಶದ ಲಕ್ನೊ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿ ಕಳೆದ ತಡರಾತ್ರಿ ಟ್ರಕ್ ಬಸ್ಸು ಮೇಲೆ ಹರಿದ ಪರಿಣಾಮ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗಾಯಗೊಂಡಿರುವ 19 ಮಂದಿ ಪ್ರಯಾಣಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸಿನಡಿ ಸಿಲುಕಿಕೊಂಡಿರುವ ಶವಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಲಕ್ನೊ ವಲಯ ಎಡಿಜಿ ಸಬತ್ ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.