ನ್ಯಾಯಾಲಯದ ಇಬ್ಬರು ಸಿಬ್ಬಂದಿ ಲೋಕಾ ಬಲೆಗೆ
Tumkur News: ಮೇಲ್ಮನವಿ ಪ್ರಕರಣದಲ್ಲಿ ಅರ್ಜಿದಾರರ ಪರ ಆದೇಶ ಮಾಡಲು 50,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಶೇಷ ಉಪವಿಭಾಗಾಧಿಕಾರಿಗಳ ನ್ಯಾಯಾಲಯ, ತುಮಕೂರು-1 ಉಪವಿಭಾಗ ಕಚೇರಿಯ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಕೊರಟಗೆರೆಯ ವೀರಣ್ಣ ಎಂಬವವರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಲಾಯಿತು.