Wednesday, 1st December 2021

ತುಂಗಾ ಡ್ಯಾಂನಿಂದ ಹೊರಹರಿವು ನಿರಂತರ: ಲಿಂಗನಮಕ್ಕಿಗೆ 73,431 ಕ್ಯೂಸೆಕ್ ಒಳಹರಿವು

ಶಿವಮೊಗ್ಗ: ಕಳೆದ 24 ಗಂಟೆಯಲ್ಲಿ ಜಿಲ್ಲೆಯ ಲಿಂಗನಮಕ್ಕಿ, ಭದ್ರಾ ಡ್ಯಾಂ ನೀರಿನ ಮಟ್ಟ ಮೂರು ಅಡಿ ಹೆಚ್ಚಳವಾಗಿದ್ದು, ಅದೇ ರೀತಿ ತುಂಗಾ ಡ್ಯಾಂನಿಂದ ಹೊರಹರಿವು ನಿರಂತರವಾಗಿದೆ.

ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಹಳ್ಳ, ಕೊಳ್ಳಗಳು ತುಂಬಿಕೊಳ್ಳುತ್ತಿವೆ. ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೂ ಒಳ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಮೂರು ಅಡಿಯಷ್ಟು ಹೆಚ್ಚಳವಾಗಿದೆ. ಶುಕ್ರವಾರ 1799.15 ಅಡಿಗೆ ಏರಿಕೆಯಾಗಿದೆ. ಲಿಂಗನಮಕ್ಕಿಗೆ 73,431 ಕ್ಯೂಸೆಕ್ ಒಳಹರಿವು ಇದೆ. ಗುರುವಾರ ನೀರಿನ ಮಟ್ಟ 1796 ಅಡಿಯಷ್ಟು ಇತ್ತು.

 

ಗುರುವಾರ 167.11 ಅಡಿ ಇತ್ತು. ಇಂದು 171.1 ಅಡಿಗೆ ತಲುಪಿದೆ. 24 ಗಂಟೆ ಅವಧಿಯಲ್ಲಿ 3.99 ಅಡಿಯಷ್ಟು ನೀರಿನ ಸಂಗ್ರಹ ಹೆಚ್ಚಳವಾಗಿದೆ. 39,286 ಕ್ಯೂಸೆಕ್ ಒಳಹರಿವು ಇದೆ. ಶುಕ್ರವಾರ ಬೆಳಗ್ಗೆ 48,323 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಹಾಗಾಗಿ ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ.