ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಪವನ್ ಕಲ್ಯಾಣ್ ಅವರು ಭಾನುವಾರ ಭೇಟಿ ನೀಡಿದ್ದರು. ಪರ್ಯಾಯ ಪುತ್ತಿಗೆ ಮಠದಿಂದ ಪವನ್ ಕಲ್ಯಾಣ್ಗೆ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಕನಕನ ಕಿಂಡಿಯ ಮೂಲಕ ಅವರು ಕೃಷ್ಣನ ದರ್ಶನ ಮಾಡಿದರು.
Yogabana: ವಿವೇಕಾನಂದ ಚಿಂತನೆಗಳನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎನ್ನುವ ನಿಟ್ಟಿನಲ್ಲಿ ಡಿವೈನ್ ಪಾರ್ಕ್ ಇಂದಿಗೂ ಕಾರ್ಯ ನಿರ್ವಹಿಸುತ್ತಿದೆ. ಯೋಗಬನ (Yogabana) ಎಂಬ ಅತಿವಿಶಿಷ್ಟ ಮಾದರಿಯ ಚಿಕಿತ್ಸಾ ಕೇಂದ್ರವನ್ನು ಮುನ್ನೆಲೆಗೆ ತಂದು ಯೋಗ, ಅಧ್ಯಾತ್ಮ, ಪ್ರಕೃತಿ, ಆಯುರ್ವೇದ ಚಿಕಿತ್ಸೆಯ ಜತೆಗೆ ವಿವೇಕಾನಂದರ ಚಿಂತನೆಗಳನ್ನು ಜೀವಂತವಾಗಿರಿಸುವ ಸಾರ್ಥಕ ಕಾರ್ಯ ಮಾಡುತ್ತಿದ್ದಾರೆ ಡಾ. ವಿವೇಕ್. ಇದು ಇರುವುದು ಉಡುಪಿ ಜಿಲ್ಲೆಯ ಕುಂದಾಪುರ ಬಳಿಯ ಸಾಲಿಗ್ರಾಮದಿಂದ ಕೇವಲ ಐದು ಕಿಮೀ ದೂರದಲ್ಲಿ.
Tempo accident in Kaup: ಕಾರ್ಯಕ್ರಮವೊಂದಕ್ಕೆ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ಅಪಘಾತಕ್ಕೀಡಾಗಿದೆ. ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಕೆಲಸಕ್ಕೆ ಬೇಕಾದ ಸಲಕರಣೆಗಳನ್ನು ವಾಹನದಲ್ಲಿ 12 ಮಂದಿ ಕಾರ್ಮಿಕರು ಸಾಗಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ದುರಂತ ಸಂಭವಿಸಿದೆ.
Udupi Laksha Kantha Geetha Parayana: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಆಯೋಜಿಸಿದ್ದ ʼಲಕ್ಷ ಕಂಠ ಗೀತಾ ಪಾರಾಯಣʼದಲ್ಲಿ ಭಾಗಿಯಾಗಲು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದರು. ಉಡುಪಿ ರಥಬೀದಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿಗೆ, ಬಿಜೆಪಿ ಕಾರ್ಯಕರ್ತರು ಹೂಮಳೆ, ಜೈಕಾರಗಳಿಂದ ಅದ್ಧೂರಿಯಾಗಿ ಸ್ವಾಗತಿಸಿದರು.
PM Narendra Modi: ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ವಿಮಾನ ನಿಲ್ದಾಣದಲ್ಲಿ ಹೃದಯಪೂರ್ವಕವಾಗಿ ಸ್ವಾಗತಿಸಿದೆ. ಇದೇ ವೇಳೆ ಅವರಿಗಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Narendra Modi Udupi visit: ಕನ್ನಡದಲ್ಲೇ ಭಾಷಣ ಆರಂಭಿಸಿದ ಪಿಎಂ ನರೇಂದ್ರ ಮೋದಿ, ʼಇಂದು ನನಗೆ ಉಡುಪಿ ಶ್ರೀಕೃಷ್ಣ ಮತ್ತು ಮಧ್ವಾಚಾರ್ಯರ ಆಶೀರ್ವಾದ ಸಿಕ್ಕಿದೆ. ಉಡುಪಿ ಮಠದಲ್ಲಿ ಲಕ್ಷ ಕಂಠ ಗೀತಾ ಪಠಣ ನಡೆದಿದೆ. ಇದರಲ್ಲಿ ಭಾಗಿಯಾಗಿದ್ದು ನನ್ನ ಪರಮ ಸೌಭಾಗ್ಯ. ಉಡುಪಿಗೆ ಬರುವುದೆಂದರೆ ನನಗೆ ಬಹಳ ಸಂತಸದ ವಿಚಾರʼ ಎಂದು ನುಡಿದರು. ಪುತ್ತಿಗೆ ಶ್ರೀಗಳಿಂದ ʼಭಾರತ ಭಾಗ್ಯ ವಿಧಾತʼ ಬಿರುದನ್ನು ಅವರು ಸ್ವೀಕರಿಸಿದರು.
Narendra Modi Udupi Visit: ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ ರಕ್ಷಣೆಯ ದೀಕ್ಷೆಯನ್ನು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೀಡಿದರು. ವಿಶಿಷ್ಟವಾಗಿ ಅಲಂಕೃತವಾದ ನವಿಲುಗರಿ ಇರುವ ಕಿರೀಟವನ್ನು ಮೋದಿಯವರಿಗೆ ಶ್ರೀಪಾದರು ಧರಿಸಿ, ಬಿರುದನ್ನು ನೀಡಿದರು. ʼನರೇಂದ್ರ ಎಂದರೆ ಅರ್ಜುನ ಎಂದರ್ಥ. ಶ್ರೀ ಕೃಷ್ಣನ ಬಳಿ ಪ್ರಧಾನಿ ಮೋದಿ ಅರ್ಜುನನಾಗಿ ಬಂದಿದ್ದಾರೆʼ ಎಂದು ಶ್ರೀಗಳು ಶ್ಲಾಘಿಸಿದರು.
ಪ್ರಧಾನಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠ ಭೇಟಿ ಲೈವ್: ಪ್ರಧಾನಿ ನರೇಂದ್ರ ಮೋದಿ ಇಂದು ಕೃಷ್ಣ ನಗರಿ ಉಡುಪಿಗೆ ಆಗಮಿಸಿದ್ದು, ಸುಮಾರು ಎರಡು ಕಿ.ಮೀ ರೋಡ್ ಶೋ ಬಳಿಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲಿ ಸ್ವರ್ಣ ಖಚಿತ ಕನಕನ ಕಿಂಡಿಯನ್ನು ಉದ್ಘಾಟಿಸಿದ್ದಾರೆ. ಬಳಿಕ ಆ ಕನಕನ ಕಿಂಡಿ ಮೂಲಕ ದೇವರ ದರ್ಶನ ಪಡೆದಿದ್ದಾರೆ. ನಂತರ ಇದೀಗ ವೇದಿಕೆ ಕಾರ್ಯಕ್ರಮದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದ್ದಾರೆ.
Laksha Kantha Gita Parayana: ಶುಕ್ರವಾರ (ನವೆಂಬರ್ 28) ಉಡುಪಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಮೋದಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಹಾಗೂ ರೋಡ್ ಶೋ ಮಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್ನಲ್ಲಿ ಕನ್ನಡದಲ್ಲೇ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ನಾಳೆ ಬೆಳಿಗ್ಗೆ 11:05 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ (Udupi Sri Krishna Math) ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ಮತ್ತೆ ಮಂಗಳೂರಿಗೆ ವಾಪಸಾಗಲಿದ್ದಾರೆ.
Udupi Sri Krishna Math: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕಾಗಿ ರೋಡ್ ಶೋ ನಡೆಸಲು ಯೋಜಿಸಲಾಗಿತ್ತು. ಆದರೆ, ಪರಿಷ್ಕೃತ ಪಟ್ಟಿಯಲ್ಲಿ ರೋಡ್ ಶೋ ರದ್ದುಗೊಳಿಸಲಾಗಿದೆ. ಹೆಲಿಪ್ಯಾಡ್ನಿಂದ ನೇರವಾಗಿ ಮಧ್ಯಾಹ್ನ 12 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ಮೋದಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ತದನಂತರ ಐತಿಹಾಸಿಕ 'ಲಕ್ಷ ಕಂಠ ಗೀತ ಗಾಯನ' ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಸಮಿತಿ-2025ರಲ್ಲಿ (ಎನ್ಐಆರ್ಎಫ್) ವಿಶ್ವವಿದ್ಯಾಲಯ ಗಳ ವಿಭಾಗದಲ್ಲಿ 3ನೇ ಸ್ಥಾನ ಗಳಿಸುವ ಮೂಲಕ ಮಾಹೆಯು ಭಾರತೀಯ ಉನ್ನತ ಶಿಕ್ಷಣದಲ್ಲಿ ತನ್ನ ನಾಯಕತ್ವವನ್ನು ಪುನರುಚ್ಚರಿಸಿದೆ. ಘಟಿಕೋತ್ಸವದ ಮೊದಲ ದಿನದಂದು 64 ಪಿಎಚ್ಡಿ ಪದವೀಧರರು ಸೇರಿ ಒಟ್ಟು 1,648 ವಿದ್ಯಾರ್ಥಿಗಳಿಗೆ ಪದವಿ ನೀಡಲಾಯಿತು.
Espionage for Pakistan: ಭಾರತೀಯ ನೌಕಾಪಡೆಯಿಂದ ಕಳೆದ ರಹಸ್ಯಗಳನ್ನು ಕದ್ದೊಯ್ದು ಪಾಕಿಸ್ತಾನಕ್ಕೆನೀಡುತ್ತಿದ್ದ ಗೂಢಚಾರಿಗಳನ್ನು ಉಡುಪಿಯ ಬಳಿ ಮಲ್ಪೆಯಲ್ಲಿ ಬಂಧಿಸಲಾಗಿದೆ. ಒಂದುವರೆ ವರ್ಷಗಳಿಂದ ಪಾಕಿಸ್ತಾನದ ಜೊತೆ ಈ ಇಬ್ಬರು ಸಂಪರ್ಕದಲ್ಲಿದ್ದು, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ನ್ಯಾಷನಲ್ ಏಜೆನ್ಸಿಗಳು ಮಧ್ಯಪ್ರವೇಶಿಸುವ ಸಾಧ್ಯತೆ ಇದೆ.
Purushottama Bilimale: ಇಲ್ಲಿ ನಾವು ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹ ಇರುತ್ತಿತ್ತು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದರು. ನಂತರ ಕ್ಷಮೆ ಯಾಚಿಸಿದ್ದಾರೆ.
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಒಣ ಹವೆ ಮುಂದುವರಿದಿದೆ. ಆದರೆ, ನ.19ರಂದು ದಕ್ಷಿಣ ಕನ್ನಡ, ಉಡುಪಿ ಸೇರಿ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿ ನೀಡಲಾಗಿದೆ.
Harish Rai funeral: ಉಡುಪಿಯಲ್ಲಿ ಹುಟ್ಟಿ ಬೆಳೆದಿದ್ದ ಹರೀಶ್ ರಾಯ್ ಅವರು ಬಳಿಕ ಅಲ್ಲಿಂದ ಮುಂಬಯಿಗೆ ಓಡಿಹೋಗಿದ್ದರು. ನಂತರ ಬೆಂಗಳೂರಿಗೆ ಬಂದು ಕನ್ನಡ ಚಿತ್ರೋದ್ಯಮಕ್ಕೆ ಸೇರಿಕೊಂಡಿದ್ದರು. ಹರೀಶ್ ಅವರ ಬಂಧುಬಾಧವರು ಇಲ್ಲಿದ್ದಾರೆ. ನಿನ್ನೆ ರಾತ್ರಿ ಅವರ ಪಾರ್ಥಿವ ಶರೀರವನ್ನು ಉಡುಪಿಗೆ ಕೊಂಡೊಯ್ಯಲಾಗಿತ್ತು. ಇಂದು ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನೆರವೇರಿತು.
Udupi Sri Krishna Math: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ವಿಶ್ವಗೀತಾ ಪರ್ಯಾಯ ಎಂದೇ ಕರೆಯಲ್ಪಡುವ 4ನೇ ಪರ್ಯಾಯೋತ್ಸವ ಆರಂಭದಲ್ಲಿ ಸಂಕಲ್ಪಿಸಿದಂತೆ, ನ. 8ರಿಂದ ಒಂದು ತಿಂಗಳ ಕಾಲ ನಡೆಯುವ ಬೃಹತ್ ಗೀತೋತ್ಸವದ ಆಮಂತ್ರಣ ಪತ್ರವನ್ನು ಬುಧವಾರ ಕನಕ ಮಂಟಪದಲ್ಲಿ ಬಿಡುಗಡೆ ಮಾಡಲಾಯಿತು. ಈ ಗೀತೋತ್ಸವದ ಅಂಗವಾಗಿ ಅಪೂರ್ವವಾದ ಲಕ್ಷಕಂಠ ಗೀತಾ ಪಾರಾಯಣ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿದ್ದಾರೆ.
Laxmi Hebbalkar: ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನಮಟ್ಟ ಸುಧಾರಣೆಯಾಗಿದೆ. ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮೀ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದು, ಇದರಿಂದ ಶೇ.88ರಷ್ಟು ಕುಟುಂಬಗಳು ಉತ್ತಮ ಮತ್ತು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುತ್ತಿದ್ದಾರೆ. ಶೇ.83ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಗ್ಯಾರಂಟಿಗಳು ಸಹಕಾರಿಯಾಗಿರುವ ಅಂಶ ಅಧ್ಯಯನದಿಂದ ಬಹಿರಂಗವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Udupi Sri Krishna Math: ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಮಠದಲ್ಲಿ ಶ್ರೀಕೃಷ್ಣ ದೇವರ ದರ್ಶನದ ನಂತರ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ‘ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವʼ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಸ್ವಾಗತಕ್ಕೆ ಈಗಾಗಲೇ ಭರದ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಗಳು ನಡೆಯುತ್ತಿವೆ.
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Bengaluru Rain) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 21°C ಇರುವ ಸಾಧ್ಯತೆ ಇದೆ.