ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ: ರಾಘವೇಶ್ವರ ಶ್ರೀ
Shri Raghaveshwara Bharathi Swamiji: ಮಳೆಯ ನೀರು ಕಪ್ಪು ಮಣ್ಣಿಗೆ ಬಿದ್ದಾಗ ಸಿಹಿ ರಸ, ಬಿಳಿ ಮಣ್ಣಿಗೆ ಬಿದ್ದಾಗ ಒಗರು, ಪರ್ವತದ ತಪ್ಪಲಲ್ಲಿ ಬಿದ್ದ ನೀರು ಖಾರ ರಸ ಎಂಬುದಾಗಿ ಮಳೆಯ ನೀರು ಯಾವ ಬಣ್ಣದ ಮಣ್ಣಿಗೆ ಬಿದ್ದಾಗ ಯಾವ ರುಚಿ ಏರ್ಪಡುತ್ತದೆ ಎಂದು ವಿಸ್ತಾರವಾಗಿ ನಮ್ಮ ಪೂರ್ವಜರು ಸಂಶೋಧಿಸಿದ್ದು, ಬಂಗಾರ, ಬೆಳ್ಳಿ , ಮಣ್ಣು ಅಥವಾ ಗಾಜಿನ ಪಾತ್ರೆಗಳಲ್ಲಿ ಮಳೆಯ ನೀರನ್ನು ಸಂಗ್ರಹ ಮಾಡಬೇಕು. ಇವುಗಳಿಂದ ನೀರಿನ ಗುಣಗಳ ನಾಶವಾಗುವುದಿಲ್ಲ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.