Monday, 30th January 2023

ವರುಣಾ ಕ್ಷೇತ್ರ ಪ್ರವಾಸ ಕೈಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜನರ ನಾಡಿಮಿಡಿತ ಅರಿಯಲೆಂದು ಮಾಜಿ ಸಿಎಂ ಸಿದ್ದರಾಮಯ್ಯ 2 ದಿನ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಮೈಸೂರು ಜಿಲ್ಲೆ ನಂಜನೂಡು ತಾಲೂಕಿನ ಹದಿನಾರು ಮೋಳೆ ಗ್ರಾಮಕ್ಕೆ ಸಿದ್ದರಾಮಯ್ಯ ಎಂಟ್ರಿ ಕೊಟ್ಟಿದ್ದು, ಸಿದ್ದರಾಮಯ್ಯಗೆ ಜನರು ಅದ್ದೂರಿಯಾಗಿ ಸ್ವಾಗತ ಕೋರಿದರು. ಸಿದ್ದರಾಮಯ್ಯಗೆ ಹೆಚ್.ಸಿ ಮಹದೇವಪ್ಪ ಸೇರಿ ಹಲವು ಕೈ ನಾಯಕರು , ಕಾರ್ಯ ಕರ್ತರು ಸಾಥ್ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಇಂದಿನಿಂದ 2 ದಿನ ವರುಣಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿ ದ್ದು, ಪಾಂಡವಪುರ, ಸಬವನಪುರ. ಹನದಿನಾರು. ಮಲ್ಲರಾಜಯ್ಯನಹುಂಡಿ. ಸುತ್ತೂರಿ ನಲ್ಲಿ ಸಿದ್ದರಾ,ಯ್ಯ ಸಂಚಾರ ಮಾಡಲಿದ್ದಾರೆ.

ಚುನಾವಣೆಗೂ ಮುನ್ನವೇ ಜನರ ನಾಡಿಮಿಡಿತ ಅರಿಯಲು ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದಾರೆ. ಇನ್ನೂ, ವರುಣಾ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.

error: Content is protected !!