ಶಿರಸಿ :
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣದಲ್ಲಿ ರಾಜಕೀಯ ಮೇಲಾಟ ಆರಂಭವಾಗಿದ್ದು,. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲೆಯ ಹಿರಿಯ ನಾಯಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಭೀಮಣ್ಣಗೆ ಸಾಥ್ ನೀಡಿದ್ದು, ಯಲ್ಲಾಪುರ ಪಟ್ಟಣದಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಈ ಹಿಂದೆ ಶಿರಸಿ-ಸಿದ್ದಾಪುರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ಕ್ಷೇತ್ರ ಬದಲಿಸಿ ಯಲ್ಲಾಪುರದ ಅಧಿಕೃತ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಭೀಮಣ್ಣ ಮತ್ತು ಅನರ್ಹ ಶಾಸಕ ಹೆಬ್ಬಾರ್ ನಡುವೆ ನೇರ ಹಣಾಹಣಿ ನಡೆಯಲಿದೆ.