ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ: ಜನಸಂಘದ ಇತಿಹಾಸ ಬಿಚ್ಚಿಟ್ಟ ಮಾಜಿ ಸಿಎಂ

Basavaraj Bommai slams Congress: ಬಿಜೆಪಿ ಮತ್ತು ಜನಸಂಘದ ಇತಿಹಾಸದ ಬಗ್ಗೆ ಮಾತನಾಡುತ್ತಾ, ಕಾಂಗ್ರೆಸ್ (Congress) ಪಕ್ಷದ ವಿರುದ್ಧ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಬ್ರಿಟಿಷರಿಂದ ಸ್ಥಾಪಿಸಲ್ಪಟ್ಟಿತು. ಭಾರತೀಯರನ್ನು ಗುಲಾಮಗಿರಿಯಲ್ಲಿಡಲು ಮತ್ತು ಬ್ರಿಟಿಷರ ಹಿತಾಸಕ್ತಿ ಕಾಪಾಡಲು ಈ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

Priyanka P
Priyanka P Apr 7, 2026 4:50 PM

ಬಾಗಲಕೋಟೆ, ಏ.7: ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಬಿಜೆಪಿ ಕೂಡ ಸೆಡ್ಡು ಹೊಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಚಾರ ಕಣದಲ್ಲಿದ್ದು, ತಮ್ಮ ಪಕ್ಷಕ್ಕೆ ಮತ ನೀಡುವಂತೆ ನಾಗರಿಕರಲ್ಲಿ ವಿನಂತಿಸಿದ್ದಾರೆ. ಈ ವೇಳೆ ಅವರು ಭಾರತೀಯ ಜನತಾ ಪಾರ್ಟಿ (BJP) ಮತ್ತು ಜನಸಂಘದ ಇತಿಹಾಸದ ಬಗ್ಗೆ ಮಾತನಾಡುತ್ತಾ, ಕಾಂಗ್ರೆಸ್ (Congress) ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷವು ಬ್ರಿಟಿಷರಿಂದ ಸ್ಥಾಪಿಸಲ್ಪಟ್ಟಿತು. ಭಾರತೀಯರನ್ನು ಗುಲಾಮಗಿರಿಯಲ್ಲಿಡಲು ಮತ್ತು ಬ್ರಿಟಿಷರ ಹಿತಾಸಕ್ತಿ ಕಾಪಾಡಲು ಈ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ದೀನದಯಾಳ್ ಉಪಾಧ್ಯಾಯ ಮತ್ತು ಶ್ಯಾಮಪ್ರಸಾದ್ ಮುಖರ್ಜಿ ಅವರು ಈ ದೇಶದ ನೆಲದ ಸಂಸ್ಕೃತಿ ಮತ್ತು ಭಾರತೀಯತೆಯನ್ನು ಉಳಿಸಲು ಒಂದು ರಾಜಕೀಯ ಶಕ್ತಿಯ ಅಗತ್ಯವಿದೆ ಎಂದು ಜನಸಂಘವನ್ನು ಪ್ರಾರಂಭಿಸಿದರು. ಆರಂಭದಲ್ಲಿ ಯಾವುದೇ ಆರ್ಥಿಕ ಸೌಲಭ್ಯವಿಲ್ಲದಿದ್ದರೂ, ಮನೆ-ಮನೆಗೆ ಹೋಗಿ ವಿಚಾರ ತಿಳಿಸುವ ಮೂಲಕ ಪಕ್ಷವನ್ನು ಕಟ್ಟಲಾಯಿತು ಎಂದು ಹೇಳಿದರು.