ಮೈಸೂರು: ನಗರದ ಮೈಲಾರಿ ಹೋಟೆಲ್‌ನಲ್ಲಿ (Mylari Hotel) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಭಾನುವಾರ ದೋಸೆ ಸವಿದರು. ಈ ವೇಳೆ ಅವರಿಗೆ ಸಚಿವರಾದ ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ನರಗುಂದ ಬಿಜೆಪಿ ಶಾಸಕ ಸಿಸಿ ಪಾಟೀಲ್ ಸಾಥ್ ನೀಡಿದರು. ಪೊಲೀಸ್ ಇಲಾಖೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮೈಸೂರಿಗೆ ತೆರಳಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿದ್ದರು.