ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹುಣಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೂಮಳೆಯ ಸ್ವಾಗತ

CM Siddaramaiah: ಮೈಸೂರು ಜಿಲ್ಲೆಯ ಹುಣಸೂರಿಗೆ ಸೋಮವಾರ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಜೆಸಿಬಿ ಮೂಲಕ ಹೂಮಳೆಯ ಸುರಿಸುವ ಮೂಲಕ ಸ್ವಾಗತ ಕೋರಿದರು. ಮಾದಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಸವ ಮಹಾದ್ವಾರವನ್ನು ಲೋಕಾರ್ಪಣೆಗೊಳಿಸಿದರು. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿ, ಶ್ರೀ ನಟರಾಜ ಸ್ವಾಮೀಜಿ, ಶ್ರೀ ಸಾಂಬ ಸದಾಶಿವ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.

ಹುಣಸೂರಿನಲ್ಲಿ ಬಸವ ಮಹಾದ್ವಾರವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಾಣೆಗೊಳಿಸಿದರು.

ಮೈಸೂರು, ಏ. 20: ಜಿಲ್ಲೆಯ ಹುಣಸೂರು ತಾಲೂಕಿನ ಮಾದಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ಸೋಮವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಬಸವ ಮಹಾದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಅಲ್ಲದೆ ತಾಲೂಕು ಕುರುಬರ ಅಭಿವೃದ್ಧಿ ಸಮಿತಿಯವರು ಹುಣಸೂರಿನ ಕನಕ ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶ್ರೀ ಗಣಪತಿ ದೇವಸ್ಥಾನದ ಉದ್ಘಾಟನೆ ನೆರವೇರಿಸಿ, ಬಳಿಕ ಸನ್ಮಾನ ಸ್ವೀಕರಿಸಿದರು. ಜತೆಗೆ ಹುಣಸೂರಿನ ಮಲ್ಲಿನಾಥಪುರದ ಶ್ರೀ ಸಿದ್ದರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.