ಅಸ್ಸಾಂ: ಹಿಟ್ಲರ್ ಆಡಳಿತವನ್ನು ನಿಲ್ಲಿಸುವ ಸಮಯ ಬಂದಿದೆ. ಈ ಬಾರಿ ಅಸ್ಸಾಂನಲ್ಲಿ (assam assembly election 2026) ಇತಿಹಾಸ ನಿರ್ಮಾಣವಾಗಲಿದೆ. ಈಗ ಬದಲಾವಣೆಯ ಸಮಯ ಬಂದಿದೆ ಎಂದು ಉಪಮುಖ್ಯಮಂತ್ರಿ (DCM), ಕಾಂಗ್ರೆಸ್ ಉಸ್ತುವಾರಿ ಡಿ.ಕೆ. ಶಿವಕುಮಾರ್ (D.K. Shivakumar) ಹೇಳಿದರು. ಅಸ್ಸಾಂ ವಿಧಾನಸಭೆ ಚುನಾವಣೆ ಹಿನ್ನೆಲೆ ಗುವಾಹಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಸ್ಸಾಂ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಕಳೆದ ಚುನಾವಣೆಯಲ್ಲಿ ನೀಡಿರುವ ಭರವಸೆಗಳನ್ನು ಈಗ ಇಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಈಡೇರಿಸಿಲ್ಲ. ಕಳೆದ ಹತ್ತು ವರ್ಷಗಳಿಂದ ಆಗದೇ ಇರುವ ಬದಲಾವಣೆ ಇಲ್ಲಿ ಈಗ ನಡೆಯಬೇಕಿದೆ. ಈ ಬಾರಿ ಅದು ಆಗುತ್ತದೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿಯಾಗಿದೆ. ನಾವು ನೀಡಿರುವ ಭರವಸೆಗಳನ್ನು ಈಡೇರಿಸುತ್ತೇವೆ. ನಾವು ಉತ್ತಮ ಆಡಳಿತವನ್ನು ಕೊಡುತ್ತೇವೆ ಎಂದು ಹೇಳಿದರು.