ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೊರೆ ಹೋದ ಕಾಂಗ್ರೆಸ್ ಶಾಸಕರು: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ

DCM DK Shivakumar: ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ರಹ ಜೋರಾಗಿದೆ. ಹೀಗಾಗಿ 25ಕ್ಕೂ ಹೆಚ್ಚು ಶಾಸಕರು ತಮಗೆ ಸಚಿವ ಸ್ಥಾನ ಕೊಡಬೇಕು ಎಂದು ದೆಹಲಿಗೆ ತೆರಳಿದ್ದಾರೆ. ʼʼಪಕ್ಷದ ಶಿಸ್ತನ್ನು ಯಾರೂ ಮೀರಬೇಡಿ. ಮಿತಿಯನ್ನು ಮೀರಿ ಮಾತನಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆʼʼ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

Priyanka P
Priyanka P Apr 13, 2026 7:16 PM

ಬೆಂಗಳೂರು, ಏ. 13: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಮೂರು ವರ್ಷ ಯಶಸ್ವಿಯಾಗಿ ಪೂರೈಸುತ್ತಿದೆ. ಈ ನಡುವೆ ಉಪಚುನಾವಣೆ ಬ್ಯುಸಿಯಲ್ಲಿದ್ದ ಪಕ್ಷದ ಮುಖಂಡರು ಕೊಂಚ ರಿಲ್ಸಾಕ್ಸ್ ಆಗುವ ಮುನ್ನವೇ ಸಚಿವ ಸಂಪುಟ ಪುನಾರಚನೆ ಚಟುವಟಿಕೆಯೂ ನಡೆಯುತ್ತಿದೆ. ಹೀಗಾಗಿ 25ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನ ಲಾಬಿಗಾಗಿ ಕಾಂಗ್ರೆಸ್ ಹೈಕಮಾಂಡ್ ಮೊರೆ ಹೋಗಿದ್ದಾರೆ. ಇದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರ ಕೆಂಗಣ್ಣಿಗೆ ಕಾರಣವಾಗಿದೆ. ʼʼಪಕ್ಷದ ಶಿಸ್ತನ್ನು ಯಾರೂ ಮೀರಬೇಡಿ. ಮಿತಿಯನ್ನು ಮೀರಿ ಮಾತನಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆʼʼ ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.