ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಸ್ಸಾಂ ಚುನಾವಣೆ: ಕೊನೆಯ ಹಂತದ ಪ್ರಚಾರದ ಅಬ್ಬರ; ಅಭಿವೃದ್ಧಿಗಾಗಿ ಎನ್‌ಡಿಎ ಬೆಂಬಲಿಸುವಂತೆ ಮೋದಿ ಮನವಿ

ಅಸ್ಸಾಂನಲ್ಲಿ ಚುನಾವಣಾ ಕಾವು ಜೋರಾಗಿದೆ. ಮತದಾನಕ್ಕೆ ಇನ್ನು ಕೇವಲ 2 ದಿನ ಉಳಿದಿದೆ. ಕೊನೆಯ ಹಂತದ ಪ್ರಚಾರದಲ್ಲಿ ವಿವಿಧ ಪಕ್ಷಗಳು ತೊಡಗಿಸಿಕೊಂಡಿವೆ. 126 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್‌ 9ರಂದು ಮತದಾನ ನಡೆಯಲಿದೆ. ಈ ಬಾರಿಯೂ ಬಿಜೆಪಿ ಮೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ.

Ramesh Ballamoole
Ramesh Ballamoole Apr 7, 2026 3:49 PM

ದಿಸ್‌ಪುರ, ಏ. 7: ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಯ ಕಾವು ರಂಗೇರಿದ್ದು, ಬಾರ್ಪೇಟಾದಲ್ಲಿ ನಡೆದ ಬಿಜೆಪಿ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಕಳೆದ ದಶಕದಲ್ಲಿ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಕೆಲಸವನ್ನು ನರೇಂದ್ರ ಮೋದಿ ಉಲ್ಲೇಖಿಸಿದರು. ಮುಂದಿನ ಹಂತದಲ್ಲಿ ರಾಜ್ಯವನ್ನು ಸ್ವಾವಲಂಬಿಯನ್ನಾಗಿ ಮಾಡುವತ್ತ ಗಮನಹರಿಸುವುದಾಗಿ ತಿಳಿಸಿದರು. ಕಳೆದ 10 ವರ್ಷಗಳು ಶಾಂತಿ, ಸ್ಥಿರತೆ ಮತ್ತು ಅಸ್ಸಾಂನ ಗುರುತನ್ನು ಕಾಪಾಡುವ ಗುರಿಯನ್ನು ಹೊಂದಿತ್ತು. ಮುಂಬರುವ ವರ್ಷಗಳಲ್ಲಿ ಆರ್ಥಿಕ ಬೆಳವಣಿಗೆ ಮತ್ತು ರಾಜ್ಯವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯಲು ಶ್ರಮಿಸಲಾಗುವುದು ಎಂದರು.