ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಂಸದ ತೇಜಸ್ವಿ ಸೂರ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು: ಸರ್ಕಾರದ ವಿಷಯದಲ್ಲಿ ತಲೆಹಾಕುವುದು ಬೇಡ ಎಂದು ಎಚ್ಚರಿಕೆ

DKS hits back at Tejasvi Surya: ಸಂಸದ ತೇಜಸ್ವಿ ಸೂರ್ಯ ಮಾಡುತ್ತಿರುವ ಟೀಕೆಗಳ ಬಗ್ಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಅವರು ತಮ್ಮ ಪಕ್ಷದ ಬಗ್ಗೆ ತಲೆಕೆಡಿಸಿಕೊಳ್ಳಲಿ. ಅವರ ಪಕ್ಷಕ್ಕೆ ಸಲಹೆಗಳನ್ನು ನೀಡಲಿ. ಬೇರೆಯವರ ವಿಷಯದಲ್ಲಿ ಅಥವಾ ಸರ್ಕಾರದ ವಿಷಯದಲ್ಲಿ ಅವರು ತಲೆಹಾಕುವುದು ಬೇಡ ಎಂದು ಎಂದು ಖಡಕ್ ಆಗಿ ಹೇಳಿದ್ದಾರೆ.

ತೇಜಸ್ವಿ ಸೂರ್ಯ ಹೇಳಿಕೆಗೆ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು, ಮಾ. 28: ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ (MP Tejasvi Surya) ರಾಜ್ಯ ಸರ್ಕಾರವನ್ನು ಟೀಕಿಸಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D K Shivakumar) ತೇಜಸ್ವಿ ಸೂರ್ಯ ಅವರಿಗೆ ಖಡಕ್ ವಾರ್ನಿಂಗ್ ನೀಡಿದರು. ಅದಕ್ಕೂ ಮುನ್ನ, ಶಾಸಕರು ಸರ್ಕಾರದ ಒಂದು ಭಾಗವಾಗಿದ್ದು, ಅವರಿಗೆ ಬರಬೇಕಾದ ಗೌರವವನ್ನು ನೀಡಬೇಕು ಎಂದು ಅವರು ಒತ್ತಿ ಹೇಳಿದರು. ತೇಜಸ್ವಿ ಸೂರ್ಯ ಮಾಡುತ್ತಿರುವ ಟೀಕೆಗಳಿಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಅವರು ತಮ್ಮ ಪಕ್ಷದ ಬಗ್ಗೆ ತಲೆಕೆಡಿಸಿಕೊಳ್ಳಲಿ. ಅವರ ಪಕ್ಷಕ್ಕೆ ಸಲಹೆಗಳನ್ನು ನೀಡಲಿ. ಬೇರೆಯವರ ವಿಷಯದಲ್ಲಿ ಅಥವಾ ಸರ್ಕಾರದ ವಿಷಯದಲ್ಲಿ ಅವರು ತಲೆಹಾಕುವುದು ಬೇಡ ಎಂದು ಎಂದು ಖಡಕ್ ಆಗಿ ಹೇಳಿದ್ದಾರೆ.