ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

“ಸಚಿವ ಸುಧಾಕರ್ ಹೆಬ್ಬೆಟ್ಟು ಒತ್ತಲು ಆರೋಗ್ಯ ವಿಚಾರ ಮುಚ್ಚಿಟ್ರಾ?”; ಮಾಜಿ ಸಿಎಂ ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?

Kumaraswamy lashes out at the government: ಸಚಿವ ಸುಧಾಕರ್‌ ಅವರ ಆರೋಗ್ಯ ಕುರಿತು ರಾಜ್ಯ ಸರ್ಕಾರ ವಾಸ್ತವಾಂಶವನ್ನು ಜನರ ಮುಂದೆ ಇಡಬೇಕು. ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿದ್ದರೆ ನಾನು ಅದನ್ನು ಪ್ರಶ್ನೆ ಮಾಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕೆಲವು ವಿಷಯಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆ ಎಂಬ ಅನುಮಾನವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಕೋಲಾರ, ಏ.28: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (H.D. Kumaraswamy) ಸಚಿವ ಸುಧಾಕರ್ ಅವರ ಹೆಬ್ಬೆಟ್ಟು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸುಧಾಕರ್‌ ಅವರ ಆರೋಗ್ಯ ಕುರಿತು ರಾಜ್ಯ ಸರ್ಕಾರ ವಾಸ್ತವಾಂಶವನ್ನು ಜನರ ಮುಂದೆ ಇಡಬೇಕು. ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿದ್ದರೆ ನಾನು ಅದನ್ನು ಪ್ರಶ್ನೆ ಮಾಡುತ್ತಿರಲಿಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಆಸ್ಪತ್ರೆಯಲ್ಲಿರುವ ವ್ಯಕ್ತಿಯು ಎಷ್ಟು ನೋವು ಅನುಭವಿಸುತ್ತಿದ್ದಾರೋ ಗೊತ್ತಿಲ್ಲ. ಅಲ್ಲಿ ಒಳಗೆ ಏನು ನಡೆಯುತ್ತಿದೆ ಎಂಬುದನ್ನು ಸರಿಯಾಗಿ ಗಮನಿಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕೆಲವು ವಿಷಯಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆ ಎಂಬ ಅನುಮಾನವನ್ನು ಅವರು ವ್ಯಕ್ತಪಡಿಸಿದ್ದಾರೆ. ಯಾವ ಕಾರಣಕ್ಕಾಗಿ ವಿಷಯಗಳನ್ನು ಮುಚ್ಚಿಟ್ಟಿದ್ದಾರೆ? ಏನಾದರೂ ಸಹಿ ಅಥವಾ ಹೆಬ್ಬೆಟ್ಟು ಒತ್ತಲು ಹೀಗೆ ಮಾಡುತ್ತಿದ್ದಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ