ಬೆಂಗಳೂರು, ಏ. 20: ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಅಧ್ಯಕ್ಷ ಎನ್.ಎ. ಹ್ಯಾರಿಸ್ (N.A. Haris) ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ (Mohammad Nalapad) ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ, ತಮಗೆ ಮಾಹಿತಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರಿಸಿದ್ದಾರೆ. ಇನ್ನು ಮಹಿಳಾ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಹಿಳೆಯರಿಗೆ ಮೀಸಲಾತಿ ನೀಡುವ ಯಾವುದೇ ಆಸಕ್ತಿ ಬಿಜೆಪಿಗಿಲ್ಲ. ಅವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದಾರೆ ಎಂದು ಟೀಕಿಸಿದ್ದಾರೆ.