ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಕುರ್ಚಿ ಇರುತ್ತದೋ ಇಲ್ಲವೋ ಗೊತ್ತಿಲ್ಲ: ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನನಗೂ ಸಿಎಂ ಆಗುವ ಆಸೆ ಇದೆ. ಹಲವರಿಗೂ ಆಸೆ ಇದೆ ಎಂದು ಹೇಳಿದ್ದಾರೆ. ಆದರೆ ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೋ, ಇಲ್ಲವೋ ಗೊತ್ತಿಲ್ಲ. ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ಹಾವೇರಿ, ಮೇ 1: ರಾಜ್ಯದಲ್ಲಿ ಮತ್ತೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಧ್ಯೇಯ. ಇದರಲ್ಲಿ ಎಲ್ಲರ ಹಿತಾಸಕ್ತಿಯು ಇದೆ. ಇನ್ನು ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೋ, ಇಲ್ಲವೋ ಗೊತ್ತಿಲ್ಲ. ನಾವು ಕೂಡ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರ ಅಭಿಮಾನೋತ್ಸವದ ಕುರಿತು ಹಾವೇರಿಯಲ್ಲಿ ಮಾಧ್ಯಮಗಳಿಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.