ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಂಜಾನ್ ದಿನ ಗೋಹತ್ಯೆ ವಿರುದ್ಧ ಮೋಹನ್ ಗೌಡ ಕಿಡಿ: ಸೂಕ್ತ ಕ್ರಮ ಕೈಗೊಳ್ಳಲು ಗೃಹಸಚಿವರಿಗೆ ಮನವಿ

ರಾಜ್ಯ ಸರ್ಕಾರ ಈಗಾಗಲೇ ಗೋಹತ್ಯೆಯನ್ನು ತಡೆಯಲು ಕಾನೂನುಗಳನ್ನು ಜಾರಿಗೆ ತಂದಿದೆ. ಆದರೆ, ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಯ ಮೂಲಕ ರಾಜ್ಯ ಗೃಹ ಸಚಿವರಿಗೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ರಾಜ್ಯ ಸಂಯೋಜಕರಾದ ಮೋಹನ್ ಗೌಡ, ಶ್ರೀರಾಮ ಸೇನೆಯ ಸುಂದ್ರೇಶ್ ನರ್ಗಲ್, ಹಿಂದೂ ಮುಖಂಡರಾದ ಸಂತೋಷ್ ಕರ್ತಾಳ್, ಅಡ್ವೋಕೇಟ್ ಶ್ರೀ. ತ್ಯಾಗರಾಜ್, ಡಾ. ನಾಗೇಂದ್ರಪ್ಪ ಸೇರಿದಂತೆ ಹಲವಾರು ಹಿಂದೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ರಂಜಾನ್ ದಿನ ಗೋಹತ್ಯೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮನವಿ

ಬೆಂಗಳೂರು, ಮಾ.18: ಹಿಂದೂ ಧರ್ಮದ ಪರಂಪರೆಯ ಪ್ರಕಾರ ಹಸುವನ್ನು ಗೋಮಾತೆ ಎಂದು ಪೂಜಿಸಲಾಗುತ್ತದೆ. ಗೋವುಗಳನ್ನು ಧಾರ್ಮಿಕವಾಗಿ ದೇವತೆಯ ಸ್ವರೂಪವೆಂದು ಗೌರವಿಸಲಾಗುತ್ತದೆ. ಭಗವಾನ್ ಶ್ರೀಕೃಷ್ಣನು ಸಹ ಗೋಮಾತೆಯ ರಕ್ಷಣೆಗೆ ಹಾಗೂ ಪಾಲನೆಗೆ ಮಹತ್ವ ನೀಡಿದ್ದಾನೆ. ಇದರ ಜೊತೆಗೆ ಗೋವುಗಳು ಕೃಷಿ ಹಾಗೂ ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಪ್ರಮುಖ ಆಧಾರವಾಗಿವೆ ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ರಾಜ್ಯ ಸಂಯೋಜಕರಾದ ಮೋಹನ್ ಗೌಡ ತಿಳಿಸಿದ್ದಾರೆ. ರಂಜಾನ್ ಹಬ್ಬದ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಗೋಸಾಗಾಟ ಮತ್ತು ಗೋಹತ್ಯೆ ನಡೆಯುತ್ತಿರುವುದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹಸಚಿವರಿಗೆ ಅವರು ಮನವಿ ಮಾಡಿದರು.