Nora Fatehi: ಪ್ರೇಮ್ಗೆ ಆ ದಿನವೇ ಹೇಳಿದ್ದೆ! ತಿರುಗಿಬಿದ್ದ ನೋರಾ ಫತೇಹಿ
Nora Fatehi: ಬಾಲಿವುಡ್ ನಟಿ ನೋರಾ ಫತೇಹಿ ಅವರು ಅಭಿನಯಿಸಿದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಕಾರಣ ಆಗಿದೆ. ದೇಶಾದ್ಯಂತ ವಿರೋಧ ವ್ಯಕ್ತವಾದ ಬಳಿಕ ನೋರಾ ಫತೇಹಿ ಅವರೇ ಜನರ ಎದುರು ಬಂದು ಸ್ಪಷ್ಟನೆ ನೀಡಿದ್ದಾರೆ. ಇಷ್ಟೆಲ್ಲ ವಿವಾದ ಆಗಿದ್ದಕ್ಕೆ ನಟಿ ನೋರಾ ಫತೇಹಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಾಡಿನಲ್ಲಿ ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂಬುದು ನನಗೆ ಗೊತ್ತೇ ಇರಲಿಲ್ಲ ಎಂದು ಅವರು ಹೇಳಿದ್ದಾರೆ.
Yashaswi Devadiga
Mar 18, 2026 6:32 PM
ಬೆಂಗಳೂರು: ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಚಿತ್ರ ʼಕೆಡಿ ದಿ ಡೆವಿಲ್ʼ (KD Movie) ಚಿತ್ರದ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದು, ನಿರ್ದೇಶಕ ಪ್ರೇಮ್ ಕುರಿತು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಹಿಂದಿ ಆಡಿಯನ್ಸ್ ಕೂಡ ಸಿಕ್ಕಾಪಟ್ಟೆ ಬೈಯಲು ಶುರು ಮಾಡಿದ್ದರು. ಈ ಬಗ್ಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಇದೀಗ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳಿಗೆ ಕೊನೆಗೂ ನಟಿ ನೋರಾ ಫತೇಹಿ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಬಗ್ಗೆ ನಟಿ ಹೇಳಿದ್ದೇನು ಎಂಬುದರ ಬಗ್ಗೆ ʼವಿಶ್ವವಾಣಿ ಟಿವಿ ಸ್ಪೆಷಲ್ʼ ಯೂಟ್ಯೂಬ್ ಚಾನೆಲ್‌ನಲ್ಲಿ ನಿರೂಪಕ ಸುಜಯ್ ರಾಜ್ ವಿವರವಾಗಿ ತಿಳಿಸಿದ್ದಾರೆ.