ಬೆಂಗಳೂರು, ಏ. 14: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಜೀರ್ ಅಹ್ಮದ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), ''ಪ್ರತಿದಿನ ವಿವಿಧ ನಾಯಕರು ನೀಡುವ ವರದಿಗಳನ್ನು ಗಮನಿಸಲಾಗುತ್ತಿತ್ತು. ಅದರ ಆಧಾರದ ಮೇಲೆ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಂಡಿದ್ದಾರೆ'' ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೊಂದಿಗೆ ಶಾಸಕರು ಸಭೆ ನಡೆಸುವುದರಲ್ಲಿ ತಪ್ಪೇನಿಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಅಭಿಪ್ರಾಯಪಟ್ಟರು. ''ಕಾಂಗ್ರೆಸ್ ಶಾಸಕರು ಪಕ್ಷದಲ್ಲಿ ಶಿಸ್ತಿನಿಂದ ಇರಬೇಕು ಎಂಬುದು ನನ್ನ ವಿನಂತಿ. ಅಲ್ಲದೆ, ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಎಚ್ಚರಿಕೆಯಿಂದ ಉತ್ತರ ನೀಡಬೇಕು ಎಂದು ಸಹೋದ್ಯೋಗಿಗಳಿಗೆ ತಿಳಿಸಿದ್ದೇನೆʼʼ ಎಂದು ಅವರು ಹೇಳಿದರು.