ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ಅಭಿವೃದ್ಧಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು? ಮೋದಿ, ವಾಜಪೇಯಿ ಮಾತುಗಳನ್ನು ಉಲ್ಲೇಖಿಸಿದ ಸಿಎಂ

CM D.K. Shivakumar: ರಾಜ್ಯ ರಾಜಧಾನಿ ಬೆಂಗಳೂರು ನಗರ ಹಾಗೂ ಕರ್ನಾಟಕದ ಅಭಿವೃದ್ಧಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಮಾತುಕತೆ ಮತ್ತು ಹಳೆಯ ಘಟನೆಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಮಾತನಾಡಿದ್ದಾರೆ. ಮುಂದಿನ 25 ವರ್ಷಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಬೆಳವಣಿಗೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದ್ದಾರೆ.

Priyanka P
Priyanka P Aug 18, 2026 5:01 PM

ಬೆಂಗಳೂರು, ಆ.18: ರಾಜ್ಯ ರಾಜಧಾನಿ ಬೆಂಗಳೂರು ನಗರ ಹಾಗೂ ಕರ್ನಾಟಕದ ಅಭಿವೃದ್ಧಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಮಾತುಕತೆ ಮತ್ತು ಹಳೆಯ ಘಟನೆಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಸದನದಲ್ಲಿ ಮಾತನಾಡಿದ್ದಾರೆ. ಎಸ್‌.ಎಂ. ಕೃಷ್ಣ ಅವರು ಸಿಎಂ ಆಗಿದ್ದ ಕಾಲದಲ್ಲಿ ಉದ್ಯಮಿ ರತನ್ ಟಾಟಾ ಅವರನ್ನು ಭೇಟಿ ಮಾಡಿದ್ದ ಘಟನೆ ಹಾಗೂ ನಾರಾಯಣಮೂರ್ತಿ ಅವರನ್ನು ಏರ್ಪೋರ್ಟ್ ಅಥಾರಿಟಿಗೆ ಅಧ್ಯಕ್ಷರನ್ನಾಗಿ ಮಾಡಿದ ವಿಷಯವನ್ನು ನೆನಪಿಸಿಕೊಂಡಿದ್ದಾರೆ. ಮುಂದಿನ 25 ವರ್ಷಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಬೆಳವಣಿಗೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಪ್ರಧಾನಿ ಮೋದಿ (PM Narendra Modi) ಅವರನ್ನು ಭೇಟಿಯಾದಾಗ ಅವರು, “ವಿಶ್ವದ ಎಲ್ಲಾ ನಾಯಕರು ಹಾಗೂ ಹೂಡಿಕೆದಾರರು ಬೆಂಗಳೂರಿನತ್ತ ನೋಡುತ್ತಿದ್ದಾರೆ” ಎಂದು ಹೇಳಿದ್ದನ್ನು ಹಂಚಿಕೊಂಡಿದ್ದಾರೆ. ವಾಜಪೇಯಿ ಅವರು ಕೂಡ ಬೆಂಗಳೂರಿನ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ. ಬೆಂಗಳೂರಿನ (Bengaluru) ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಹೆಸರುಘಟ್ಟ, ಹೊಸಕೋಟೆ ಮತ್ತು ತಿಪ್ಪಗೊಂಡನಹಳ್ಳಿ ಮುಂತಾದ ಸುತ್ತಮುತ್ತಲಿನ ಕೆರೆಗಳನ್ನು ಸುಧಾರಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಗಳ ಬಗ್ಗೆ ಅವರು ಮಾತನಾಡಿದರು.