ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ: ತುರ್ತು ಪರಿಹಾರಕ್ಕೆ ಎಂ.ಬಿ. ಪಾಟೀಲ್ ಪತ್ರ
MB Patil: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದಿಂದ ತಾವು ಪ್ರತಿನಿಧಿಸುತ್ತಿರುವ ಬಬಲೇಶ್ವರ ವಿಧಾನಸಭಾ ಕ್ಷೇತ್ರದ 15 ಗ್ರಾಮಗಳ 5,600 ಎಕರೆ ಮುಳುಗಡೆ ಆಗುತ್ತಿದೆ. ಈ ಪೈಕಿ ಮೊದಲ ಹಂತದಲ್ಲಿ 1,000 ಎಕರೆಗಾದರೂ ಪರಿಹಾರ ಕೊಡಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.