Viral Video: ಚಲಿಸುತ್ತಿದ್ದ ರೈಲಿನಿಂದ ಜಾರಿ ಬಿದ್ದ ವೃದ್ಧೆ; ಮುಂದೇನಾಯ್ತು? ವಿಡಿಯೊ ನೋಡಿ
ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ವೃದ್ಧೆಯೊಬ್ಬರು ಕಾಲು ಜಾರಿ ಬಿದ್ದಿದ್ದು, ತಕ್ಷಣ ಕಾರ್ಯಪ್ರವರ್ತರಾದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಕಾನ್‌ಸ್ಟೇಬಲ್ ಎಸ್.ಆರ್.ಗೋದಾರಾ ಅವರು ವೃದ್ಧ ಮಹಿಳೆಯ ಜೀವವನ್ನು ರಕ್ಷಿಸಿದ ಘಟನೆ ಕಾನ್ಪುರ ಸೆಂಟ್ರಲ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ.
Source : Free press jounal
ಕಾನ್ಪುರ, ಜ. 15, 2025: ಇತ್ತೀಚೆಗೆ ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ವೃದ್ಧೆಯೊಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಆಗ ಸ್ಥಳದಲ್ಲಿದ್ದ ಆರ್‌ಪಿಎಫ್ ಕಾನ್‌ಸ್ಟೇಬಲ್ ಎಸ್.ಆರ್.ಗೋದಾರಾ ತಕ್ಷಣ ಅವರ ಕೈಯನ್ನು ಹಿಡಿದು ಎಳೆದು ಜೀವವನ್ನು ಉಳಿಸಿದ್ದಾರೆ. ಈ ವಿಡಿಯೊ ಸೋಶಿಯಲ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಕಾನ್ಪುರ ಸೆಂಟ್ರಲ್ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 6ರಲ್ಲಿ ಸೋಮವಾರ (ಜ. 13) ಬೆಳಗ್ಗೆ 9:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ರೈಲು ಸಂಖ್ಯೆ 12594 ಗರೀಬ್ ರಥ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಜಿ -9 ಬೋಗಿಯಿಂದ ಬೇಗನೆ ಇಳಿಯಲು ಪ್ರಯತ್ನಿಸುವಾಗ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಬಿದ್ದಿದ್ದಾರೆ. ಆ ಪರಿಸ್ಥಿತಿಯಲ್ಲಿ ಮಹಿಳೆಯ ಜೀವಕ್ಕೆ ಅಪಾಯವಿದ್ದರಿಂದ ತಕ್ಷಣ ಕಾನ್‌ಸ್ಟೇಬಲ್ ಗೋದಾರಾ ಕಾರ್ಯನಿರ್ವಹಿಸಿ ಅವರನ್ನು ಸುರಕ್ಷಿತವಾಗಿ ಮೇಲಕ್ಕೆ ಎಳೆದಿದ್ದಾರೆ. ಇಡೀ ರಕ್ಷಣಾ ಕಾರ್ಯವು ಸಿಸಿಟಿವಿ ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗಿದ್ದು, ಕಾನ್‌ಸ್ಟೇಬಲ್ ಸಮಯೋಚಿತ ಕ್ರಮಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.
ಈ ಸುದ್ದಿಯನ್ನೂ ಓದಿ:Viral Video: ಬಿಬಿಎಂಪಿ ನಿರ್ಲಕ್ಷ್ಯ; 83ರ ಇಳಿ ವಯಸ್ಸಿನಲ್ಲಿ ಬೀದಿ ಕಸ ಗುಡಿಸುವ ಅಜ್ಜ: ವಿಡಿಯೊ ವೈರಲ್
महाकुम्भ चल रहा है और हमारे RPF के जवान भी पूरे मुस्तेदी से अपना कार्य कर रहे है, कानपुर रेलवे स्टेशन पर एक महिला यात्री की जान बचाई , देवदूत बने RPF के जवान सहीराम गोदारा 🫡 pic.twitter.com/Gji0ZVdb1M
— Vikash Mohta (@VikashMohta_IND) January 14, 2025
ಈ ಘಟನೆಯು ಪ್ರಯಾಣಿಕರ ಸುರಕ್ಷತೆಯ ವಿಷಯದಲ್ಲಿ ರೈಲ್ವೆ ಸಿಬ್ಬಂದಿಯ ಜಾಗರೂಕತೆ ಮತ್ತು ತ್ವರಿತ ಚಿಂತನೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ. ಇಂತಹ ಅಪಘಾತಗಳನ್ನು ತಪ್ಪಿಸಲು ಚಲಿಸುವ ರೈಲುಗಳನ್ನು ಹತ್ತುವಾಗ ಅಥವಾ ಇಳಿಯುವಾಗ ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.