ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಸಾವಿರಾರು ಜನ ಓಡಾಡೋ ಹೈವೇಯಲ್ಲಿ ನೇತಾಡುತ್ತಿದೆ ಅಪಾಯಕಾರಿ ಕೇಬಲ್‌ ವೈರ್‌! ವಿಡಿಯೊ ಫುಲ್‌ ವೈರಲ್‌

ಗೋರೆಗಾಂವ್ ಪೂರ್ವದ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಸೇತುವೆಯಿಂದ ಕೇಬಲ್ ವೈರ್‌ವೊಂದು ಅಪಾಯಕಾರಿಯಾಗಿ ನೇತಾಡುತ್ತಿರುವುದನ್ನು ತೋರಿಸುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿ ವೈರಲ್ (Viral Video)ಆಗಿದೆ. ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಸಮಸ್ಯೆಯಾಗಿದ್ದು, ಯಾವುದೇ ಅಪಘಾತ ಸಂಭವಿಸುವ ಮೊದಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಲಾಗಿದೆ.

ಹೆದ್ದಾರಿಯಲ್ಲಿ ನೇತಾಡುತ್ತಿದೆ ಯಮಸ್ವರೂಪಿ ಕೇಬಲ್‌ ವೈರ್;‌ ವಿಡಿಯೊ ವೈರಲ್‌

Profile pavithra Mar 27, 2025 3:43 PM

ಮುಂಬೈ: ಗೋರೆಗಾಂವ್ ಪೂರ್ವದ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಸೇತುವೆಯಲ್ಲಿ ಕೇಬಲ್ ವೈರ್‌ಗಳಿ ಅಪಾಯಕಾರಿಯಾಗಿ ನೇತಾಡುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌(Viral Video) ಆಗಿದೆ. ಈ ವಿಡಿಯೊ ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟುಮಾಡಿದೆ. ಒಬೆರಾಯ್ ಮಾಲ್ ಮುಂದೆ ಸೆರೆಹಿಡಿಯಲಾದ ಈ ವಿಡಿಯೊ, ಜನ ದಟ್ಟಣೆಯ ಸಮಯದಲ್ಲಿ ವಾಹನಗಳು ಈ ಪ್ರದೇಶದ ಮೂಲಕ ಹಾದುಹೋಗುವುದರಿಂದ ಸಂಭವಿಸಬಹುದಾದ ಅಪಾಯವನ್ನು ಎತ್ತಿ ತೋರಿಸುತ್ತದೆ. ಯಾವುದೇ ಅಪಘಾತ ಸಂಭವಿಸುವ ಮೊದಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಲಾಗಿದೆ.

ಇತ್ತೀಚೆಗಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೊದಲ್ಲಿ ಬಿಡುವಿಲ್ಲದ ಸಂಚಾರ ಸಮಯದಲ್ಲಿ ವಾಹನಗಳು ಹಾದುಹೋಗುವಾಗ ತಂತಿಯು ಸೇತುವೆಯಿಂದ ನೇತಾಡುತ್ತಿರುವುದು ಸೆರೆಯಾಗಿದೆ. ಒಂದೆರಡು ವಾಹನಗಳು ಕೇಬಲ್‍ಗೆ ಡಿಕ್ಕಿ ಹೊಡೆದು ಮುಂದೆ ಚಲಿಸಿದೆಯಂತೆ.

ಸೇತುವೆ ಮೇಲಿನಿಂದ ವೈರ್‌ ನೇತಾಡುತ್ತಿರುವ ವಿಡಿಯೊ ಇಲ್ಲಿದೆ ನೋಡಿ...



ಈ ವಿಡಿಯೊವನ್ನು ನೆಟ್ಟಿಗರೊಬ್ಬರು ಹಂಚಿಕೊಂಡಿದ್ದು, ಮುಖ್ಯಮಂತ್ರಿ ಕಚೇರಿ (ಸಿಎಂಒ), ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ), ಮುಂಬೈ ಸಂಚಾರ ಪೊಲೀಸರು ಮತ್ತು ಮುಂಬೈ ಪೊಲೀಸರನ್ನು ಟ್ಯಾಗ್ ಮಾಡಿ, ಯಾವುದೇ ಅಪಘಾತ ಸಂಭವಿಸುವ ಮೊದಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ವೈರಲ್ ಪೋಸ್ಟ್ ಅನ್ನು ನೋಡಿದ ಮುಂಬೈ ಪೊಲೀಸರು ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (ಎಂಎಸ್ಇಡಿಸಿಎಲ್) ಅನ್ನು ಟ್ಯಾಗ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ ಮತ್ತು ಸಮಸ್ಯೆಯನ್ನು ಪರಿಹರಿಸುವಂತೆ ವಿನಂತಿಸಿದ್ದಾರೆ. ಆದರೆ ಎಂಎಸ್ಇಡಿಸಿಎಲ್ ಈ ವಿಷಯದ ಬಗ್ಗೆ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ವೈರಲ್ ವಿಡಿಯೊವನ್ನು ಬಿಎಂಸಿ ಗಮನಕ್ಕೆ ತೆಗೆದುಕೊಂಡಿದ್ದು, ಈ ವಿಷಯದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ. "ನಿಮ್ಮ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ಈ ಬಗ್ಗೆ ನಾವು ಬಿಎಂಸಿ ವಾರ್ಡ್ ಪಿ ದಕ್ಷಿಣಕ್ಕೆ ಮಾಹಿತಿ ನೀಡಿದ್ದೇವೆ" ಎಂದು ನಾಗರಿಕ ಸಂಸ್ಥೆಯ ಅಧಿಕೃತ ಸೋಶಿಯಲ್ ಮೀಡಿಯಾ ಹ್ಯಾಂಡಲ್‍ನಲ್ಲಿ ತಿಳಿಸಿದೆ. ಈ ಮಧ್ಯೆ ಮುಂಬೈ ಸಂಚಾರ ಪೊಲೀಸರು ಈ ವಿಷಯದ ಬಗ್ಗೆ ಸಂಬಂಧಪಟ್ಟ ಸಂಚಾರ ವಿಭಾಗಕ್ಕೆ ಮಾಹಿತಿ ನೀಡುವ ಮೂಲಕ ತಮ್ಮ ಸಹಾಯಹಸ್ತವನ್ನು ನೀಡಿದ್ದಾರೆ. "ಅಗತ್ಯ ಕ್ರಮಕ್ಕಾಗಿ ನಾವು ಸಂಚಾರ ವಿಭಾಗಕ್ಕೆ ಮಾಹಿತಿ ನೀಡಿದ್ದೇವೆ" ಎಂದು ಸಂಚಾರ ಪೊಲೀಸರು ವೈರಲ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ವೈರಲ್ ಆಗಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳನ್ನು ಹುಟ್ಟುಹಾಕಿದೆ. ನೆಟ್ಟಿಗರು ಮುಂಬೈನಲ್ಲಿ ನಗರ ಮೂಲಸೌಕರ್ಯ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಸ್ಥಿತಿಯನ್ನು ಪ್ರಶ್ನಿಸಿದ್ದಾರೆ. ಸಂಭಾವ್ಯ ಅಪಘಾತಗಳನ್ನು ತಡೆಗಟ್ಟಲು ನಿಯಮಿತ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸುವಂತೆ ಅನೇಕರು ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Viral Video: ಡ್ರೋನ್ ಮಾಡಿದ ಎಡವಟ್ಟಿಗೆ ವಧು-ವರರು ಸುಸ್ತೋ ಸುಸ್ತು! ವಿಡಿಯೊ ನೋಡಿದ್ರೆ ನೀವು ಬಿದ್ದು ಬಿದ್ದು ನಗ್ತೀರಿ!

ಈ ಹಿಂದೆ ಮುಂಬೈ ಕರಾವಳಿ ರಸ್ತೆಯ ಉತ್ತರ ದಿಕ್ಕಿನಲ್ಲಿ ಹಾಜಿ ಅಲಿ ಬಳಿ ವರ್ಲಿ ಕಡೆಯ ಸೇತುವೆಯನ್ನು ಪ್ಯಾಚ್‍ವರ್ಕ್‌ ಮಾಡಿದ ವಿಡಿಯೊ ಸೋಶಿಯಲ್ ಮೀಡಿಯದಲ್ಲಿ ವೈರಲ್ ಆಗಿತ್ತು. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.