ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಕುಡಿದ ಮತ್ತಿನಲ್ಲಿ ಮಹಿಳೆ ಬಳಿ ಅನುಚಿತವಾಗಿ ವರ್ತಿಸಿದ ವ್ಯಕ್ತಿ; ಕೃತ್ಯ ವಿಡಿಯೊದಲ್ಲಿ ಸೆರೆ

ಇತ್ತೀಚೆಗೆ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಕುಡುಕ ವ್ಯಕ್ತಿಯೊಬ್ಬ ಆಕೆಯ ತೋಳುಗಳನ್ನು ಸ್ಪರ್ಶಿಸಿ ಕಿರುಕುಳ ನೀಡಿದ ಘಟನೆ ದೆಹಲಿಯ ಶಿವಾಜಿ ಎನ್‌ಕ್ಲೇವ್‌ ಮಾರುಕಟ್ಟೆ ಬಳಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕುಡಿದ ಮತ್ತಿನಲ್ಲಿ ಮಹಿಳೆ ಬಳಿ ಅನುಚಿತವಾಗಿ ವರ್ತಿಸಿದ ವ್ಯಕ್ತಿ

Profile pavithra Apr 15, 2025 3:49 PM

ಹೊಸದಿಲ್ಲಿ: ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆಯ ಆಘಾತದಿಂದ ಜನರು ಇನ್ನೂ ಚೇತರಿಸಿಕೊಂಡಿಲ್ಲ. ಇದರ ನಡುವೆೆ ಇದೀಗ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಕುಡುಕ ವ್ಯಕ್ತಿಯೊಬ್ಬ ಆಕೆಯ ತೋಳುಗಳನ್ನು ಸ್ಪರ್ಶಿಸಿ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿಯ ಶಿವಾಜಿ ಎನ್‌ಕ್ಲೇವ್‌ ಮಾರುಕಟ್ಟೆ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್( Viral Video) ಆಗಿದೆ.

ಭಾವನಾ ಶರ್ಮಾ ಎಂಬ ಯುವತಿ ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ಬಗ್ಗೆ ಹೇಳಿದ್ದಾಳೆ ಮತ್ತು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾಳೆ. ವಿಡಿಯೊದಲ್ಲಿ ಆಕೆ ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಹೋಗುತ್ತಿದ್ದಾಗ ವ್ಯಕ್ತಿಯೊಬ್ಬ ಆಕೆಯ ಬಳಿಗೆ ಬಂದು ಅನುಚಿತವಾಗಿ ವರ್ತಿಸಿದ್ದಾನಂತೆ. ಘಟನೆಯಿಂದ ಶಾಕ್‌ಗೆ ಒಳಗಾದ ಯುವತಿ ಸುಮ್ಮನಾಗದೇ ಆ ವ್ಯಕ್ತಿಯ ವಿಡಿಯೊ ರೆಕಾರ್ಡ್‌ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾಳೆ.

ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯ ವಿಡಿಯೊ ಇಲ್ಲಿದೆ ನೋಡಿ...



ಇತ್ತೀಚೆಗೆ ವರದಿಯಾದ ಇದೇ ರೀತಿಯ ಘಟನೆಯಲ್ಲಿ, ಏಪ್ರಿಲ್ 8ರಂದು ವಿವಾಹಿತ ದಂಪತಿ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬೈಕ್‍ನಲ್ಲಿ ಬಂದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ವಿವಾಹಿತ ದಂಪತಿ ದೆಹಲಿಯ ರಸ್ತೆಗಳಲ್ಲಿ ಅಸಹಾಯಕರಾಗಿದ್ದಾಗ ಆ ಪುರುಷರು ತಮಾಷೆಯಾಗಿ ನಗುತ್ತಾ ಪತ್ನಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ದಂಪತಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ:Viral Video: ಸತ್ತ ಸೊಳ್ಳೆಯನ್ನು ಸಂಗ್ರಹಿಸುವ ಹುಡುಗಿ; ವೈರಲ್‌ ಆಯ್ತು ವಿಲಕ್ಷಣ ಹವ್ಯಾಸದ ವಿಡಿಯೊ

ಈ ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದರೂ, ಈ ಪ್ರಕರಣದಲ್ಲಿ ಅಧಿಕಾರಿಗಳ ನಿರಾಸಕ್ತಿಯ ಬಗ್ಗೆ ಸಂತ್ರಸ್ತರು ಹತಾಶೆ ವ್ಯಕ್ತಪಡಿಸಿದ್ದಾರೆ. ಪೊಲೀಸರಿಂದ ನ್ಯಾಯ ಸಿಗುವ ಯಾವುದೇ ಭರವಸೆ ಇಲ್ಲದ ಕಾರಣ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವುದಾಗಿ ತಿಳಿಸಿದ್ದಾರೆ.