ಮುಂಬೈ: ಬಾಂದ್ರಾದ ಕಾರ್ಟರ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಿನ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದರಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ವ್ಯಕ್ತಿಯೊಬ್ಬ ಮಲಗಿದ್ದು, ಆತ ತೀವ್ರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಆ ವ್ಯಕ್ತಿಯ ಸ್ಥಿತಿಯ ಬಗ್ಗೆ ಸರಿಯಾದ ವಿವರಗಳು ತಿಳಿದುಬಂದಿಲ್ಲ, ಆದರೆ ಈ ದೃಶ್ಯಗಳು ನಗರದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿವೆ.ಈ ಸುದ್ದಿ ಈಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral News) ಆಗಿದೆ.
'ಬಾಂದ್ರಾ ಬಝ್' ಎಂಬ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಮತ್ತು ಜೂನ್ 7 ರಂದು ಮಧ್ಯರಾತ್ರಿ 12.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಪೋಸ್ಟ್ ವೈರಲ್ ಆಗಿ ನೆಟ್ಟಿಗರು ಡ್ರೈವ್ ಮಾಡುತ್ತಿದ್ದ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಪೊಲೀಸ್ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ವಿಡಿಯೊ ಇಲ್ಲಿದೆ ನೋಡಿ
ವೈರಲ್ ಆದ ವಿಡಿಯೊದಲ್ಲಿ ಬಾಂದ್ರಾ ರಸ್ತೆಯಲ್ಲಿ ತಡರಾತ್ರಿ ಬಿಳಿ ಬಣ್ಣದ ಕಾರೊಂದು ಚಲಿಸುತ್ತಿರುವ ದೃಶ್ಯ ಸೆರೆಯಾಗಿದೆ. ಬಿಳಿ ಶರ್ಟ್ ಮತ್ತು ಫಾರ್ಮಲ್ ಪ್ಯಾಂಟ್ ಧರಿಸಿದ ವ್ಯಕ್ತಿಯೊಬ್ಬ ಕಾರಿನ ಬಾನೆಟ್ ಮೇಲೆ ಮಲಗಿದ್ದಾನೆ. ಆ ವ್ಯಕ್ತಿ ಹಾಗ್ಯಾಕೆ ಮಲಗಿದ್ದ ಎಂಬ ಕಾರಣ ಮಾತ್ರ ಸ್ಪಷ್ಟವಾಗಿಲ್ಲ! ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬ ಮಲಗಿದ್ದರೂ ಚಾಲಕ ಕಾರು ಚಲಾಯಿಸುತ್ತಿರುವುದನ್ನು ನೋಡಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ವ್ಯಕ್ತಿಯ ಬದುಕುಳಿದಿದ್ದಾನೆಯೇ ಅಥವಾ ಸಾವನಪ್ಪಿದ್ದಾನೇ? ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಆದರೆ ಈ ಘಟನೆಯು ರಸ್ತೆ ಸುರಕ್ಷತೆಯ ಬಗ್ಗೆ ಕಳವಳವನ್ನು ಮೂಡಿಸಿದೆ.
ಈ ವಿಡಿಯೊವನ್ನು ಮುಂಬೈ ಪೊಲೀಸರಿಗೆ ಟ್ಯಾಗ್ ಮಾಡಿ ಸಂಬಂಧಪಟ್ಟ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಹಾಗೇ ಈ ವಿಡಿಯೊಗೆ ಪ್ರತಿಕ್ರಿಯಿಸಿದ ಪೊಲೀಸರು , ಅಗತ್ಯ ಕ್ರಮಕ್ಕಾಗಿ ಖಾರ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳಿಗೆ ಈ ವಿಷಯವನ್ನು ತಿಳಿಸಿರುವುದಾಗಿ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ:Viral Video: ಬೀಚ್‌ನಲ್ಲಿ ರೊಮ್ಯಾನ್ ಮಾಡುತ್ತ ಮೈಮರೆತ ಜೋಡಿ: ಮಹಿಳೆ ನೀರುಪಾಲು...ವೈರಲ್ ಆಯ್ತು ಭಯಾನಕ ವಿಡಿಯೊ
ಇತ್ತೀಚೆಗಷ್ಟೇ ಮುಂಬೈನಲ್ಲಿ ರಾತ್ರಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಬಾನೆಟ್‌ಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯೊಬ್ಬ ತನ್ನ ಜೀವ ಉಳಿಸಿಕೊಳ್ಳಲು ಹತಾಶನಾಗಿ ಪ್ರಯತ್ನಿಸುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಮೂಲಗಳ ಪ್ರಕಾರ, ಈ ಘಟನೆ ಮುಂಬೈನ ವಿಲೇ ಪಾರ್ಲೆ ಪ್ರದೇಶದಲ್ಲಿ ನಡೆದಿದೆಯಂತೆ. ಎರಡು ವಾಹನಗಳ ಚಾಲಕರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಇದರಿಂದ ಕೋಪಗೊಂಡ ಎರ್ಟಿಗಾ ಚಾಲಕ ತನ್ನ ಕಾರಿನ ಮುಂದೆ ನಿಂತಿದ್ದ ಇನ್ನೊಬ್ಬ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ವೈರಲ್ ಆದ ವಿಡಿಯೋ ಆಧರಿಸಿ, ಮುಂಬೈ ಪೊಲೀಸರು ಎರ್ಟಿಗಾ ಚಾಲಕ ಭೀಮ್ ಕುಮಾರ್ ಮಹ್ತೊ ವಿರುದ್ಧ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.