Viral Video: ಭಾರೀ ಮಳೆಗೆ ರಸ್ತೆಯಲ್ಲಿ ಹರಿದ ನೀರಿನ ರಭಸಕ್ಕೆ ಸ್ಕೂಟಿ ಜೊತೆ ಕೊಚ್ಚಿ ಹೋದ ವ್ಯಕ್ತಿ- ವಿಡಿಯೊ ವೈರಲ್
ಕಳೆದ 24 ಗಂಟೆಗಳಲ್ಲಿ ಗೋವಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಯಲ್ಲಿ ಹರಿಯುವ ನೀರಿನ ರಭಸಕ್ಕೆ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.


ಪಣಜಿ: ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗೋವಾ(Goa)ದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೂ ಮುನ್ನ, ಐಎಂಡಿ ರಾಜ್ಯಾದ್ಯಂತ ರೆಡ್ ಅಲರ್ಟ್(Red Alert) ಘೋಷಿಸಿತ್ತು. ಮಳೆಯಿಂದಾಗಿ ದೈನಂದಿನ ಜೀವನ ಅಸ್ತವ್ಯಸ್ತವಾಗಿದ್ದು, ಜನರು ಕಳವಳಗೊಂಡಿದ್ದಾರೆ. ಅಷ್ಟೇ ಅಲ್ಲದೇ ಭಾರೀ ಮಳೆಯಾಗುತ್ತಿರುವುದರಿಂದ ರಾಜ್ಯದ ಕೆಲವು ಭಾಗಗಳಲ್ಲಿ ರಸ್ತೆ ಸಂಚಾರ ಕೂಡ ಅಸ್ತವ್ಯಸ್ತವಾಗಿದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video)ಆಗಿದೆ.
ವೈರಲ್ ಆದ ವಿಡಿಯೊದಲ್ಲಿ ಸ್ಕೂಟಿಯಲ್ಲಿದ್ದ ವ್ಯಕ್ತಿಯೊಬ್ಬ ನೀರು ತುಂಬಿದ ರಸ್ತೆಯಲ್ಲಿ ಸಿಲುಕಿಕೊಂಡಿರುವುದನ್ನು ಸೆರೆಹಿಡಿಯಲಾಗಿದೆ. ನೀರಿನ ಹರಿವು ಎಷ್ಟು ವೇಗವಾಗಿತ್ತೆಂದರೆ, ಆ ವ್ಯಕ್ತಿ ಪ್ರವಾಹದ ಜೊತೆಗೆ ಕೊಚ್ಚಿ ಹೋಗಿದ್ದಾನೆ. ನೀರು ಅವನ ಸ್ಕೂಟರ್ ಜೊತೆಗೆ ಅವನನ್ನು ಕೊಚ್ಚಿಕೊಂಡು ಹೋಗಿದೆ. ಪ್ರವಾಹದ ನೀರಿನಲ್ಲಿ ಆ ವ್ಯಕ್ತಿ ತನ್ನನ್ನು ತಾನು ಸಮತೋಲನ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಘಟನೆಯನ್ನು ನೋಡುಗರೊಬ್ಬರು ರೆಕಾರ್ಡ್ ಮಾಡಿದ್ದು, ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಳೆಯ ವಿಡಿಯೊ ಇಲ್ಲಿದೆ ನೋಡಿ...
Heavy rain in Goa.#GoaRains #flood #goapic.twitter.com/ZrhKv5NjYd
— Priyathosh Agnihamsa (@priyathosh6447) May 21, 2025
ಮಾಹಿತಿ ಪ್ರಕಾರ ಆ ವ್ಯಕ್ತಿ ಕೊಚ್ಚಿಕೊಂಡು ಹೋಗಿ ಚರಂಡಿಗೆ ಬಿದ್ದಿದ್ದು, ಸ್ಥಳೀಯರು ಅವನನ್ನು ಹೊರಗೆಳೆದು ರಕ್ಷಿಸಿದ್ದಾರೆ. ಘಟನೆಯಲ್ಲಿ ಆತನಿಗೆ ಗಂಭೀರ ಗಾಯಗಳಾಗಲಿಲ್ಲ ಎನ್ನಲಾಗಿದೆ. ಮತ್ತೊಂದು ವಿಡಿಯೊದಲ್ಲಿ ಇಬ್ಬರು ಹುಡುಗಿಯರು ರಸ್ತೆ ದಾಟಲು ಪ್ರಯತ್ನಿಸುತ್ತಿರುವಾಗ ನೀರು ತುಂಬಿದ ರಸ್ತೆಯಲ್ಲಿ ಬೀಳುವುದನ್ನು ಸೆರೆಯಾಗಿದೆ. ಭಾರೀ ಮಳೆಯಾಗುತ್ತಿರುವುದರಿಂದ ಕೈಯಲ್ಲಿ ಛತ್ರಿ ಹಿಡಿದುಕೊಂಡು ರಸ್ತೆ ದಾಟಲು ಪ್ರಯತ್ನಿಸುವಾಗ ಈ ಘಟನೆ ಸಂಭವಿಸಿದೆ.
ಈ ಘಟನೆಗಳು ಅಧಿಕಾರಿಗಳ ಪೂರ್ವಸಿದ್ಧತೆಯಿಲ್ಲದೆ ನಿರ್ಲಕ್ಷ್ಯ ತೋರಿಸಿರುವುದನ್ನು ಬಹಿರಂಗಪಡಿಸಿವೆ. ಹೀಗಾಗಿ ರಾಜ್ಯದಲ್ಲಿ ಮಾನ್ಸೂನ್ ಸಮೀಪಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಜನರು ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎನ್ನಲಾಗಿದೆ. ಪೂರ್ವ ಮುಂಗಾರು ಮಳೆಯಿಂದಾಗಿ ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿರುವುದಕ್ಕೆ ಸೋಶಿಯಲ್ ಮಿಡಿಯಾ ನೆಟ್ಟಿಗರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರೀ ಮಳೆಯಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಚರಂಡಿಗಳನ್ನು ಸರಿಯಾಗಿ ಸ್ವಚ್ಛಗೊಳಿಸದ ಕಾರಣ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ಇಂತಹ ಅನೇಕ ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿವೆ.ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಎಚ್ಚರಿಕೆಯ ನಂತರ ತುರ್ತು ಕೆಲಸವಿಲ್ಲದಿದ್ದರೆ ಜನರು ತಮ್ಮ ಮನೆಗಳನ್ನು ಬಿಟ್ಟು ಹೊರಬರದಂತೆ ಆಡಳಿತವು ಮನವಿ ಮಾಡಿದೆ. ಈ ನಡುವೆ ಮಹಾನಗರ ಪಾಲಿಕೆ ಮತ್ತು ಲೋಕೋಪಯೋಗಿ ಇಲಾಖೆಯು ಒಳಚರಂಡಿ ಕೆಲಸ ಮಾಡುತ್ತಿದೆ ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ: Viral Video: ರೈಲಿನಲ್ಲಿ ಮಹಿಳೆಯನ್ನು ಹಿಗ್ಗಾಮುಗ್ಗಾ ಥಳಿಸಿದ ವ್ಯಕ್ತಿ; ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
ಇದಕ್ಕೂ ಮೊದಲು, ಮಹಾರಾಷ್ಟ್ರದಲ್ಲಿ ಮೇ 20ರಂದು ಭಾರಿ ಮಳೆಯಾಯಿತು. ರಾಜ್ಯದ ಕೆಲವು ಭಾಗಗಳಲ್ಲಿ ನೀರು ನಿಂತಿತ್ತು. ಮುಂಬೈನಲ್ಲಿ ಮಳೆಯಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ ಎನ್ನಲಾಗಿದೆ. ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಅಂಧೇರಿಯಲ್ಲಿ ಸುರಂಗಮಾರ್ಗವು ನೀರಿನಿಂದ ತುಂಬಿ ತಾತ್ಕಾಲಿಕವಾಗಿ ಮುಚ್ಚಬೇಕಾಯಿತು.