ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಕೈಯಲ್ಲಿ ಬಂದೂಕು ಹಿಡಿದು ನಡುರಸ್ತೆಯಲ್ಲಿ ಕುಣಿದ ಮಹಿಳೆ; ಕೊನೆಗೆ ಆಗಿದ್ದೇನು?

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬಳು ಕೈಯಲ್ಲಿ ಬಂದೂಕನ್ನು ಹಿಡಿದು ನಡುರಸ್ತೆಯಲ್ಲಿ ನೃತ್ಯ ಮಾಡಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video) ಆಗಿ ನೆಟ್ಟಿಗರು ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರೀಲ್ಸ್‌ ಕ್ರೇಜ್‌; ಬಂದೂಕು ಹಿಡಿದು ಡ್ಯಾನ್ಸ್‌ ಮಾಡಿದ ಮಹಿಳೆ

Profile pavithra Jul 10, 2025 4:49 PM

ಲಖನೌ: ಇದೀಗ ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬಳು ಕೈಯಲ್ಲಿ ಬಂದೂಕನ್ನು ಹಿಡಿದು ನಡುರಸ್ತೆಯಲ್ಲಿ ನೃತ್ಯ ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ವೈರಲ್ ಆದ ವಿಡಿಯೊದಲ್ಲಿ, ಮಹಿಳೆ ಕೈಯಲ್ಲಿ ಬಂದೂಕು ಹಿಡಿದು ಕಾನ್ಪುರ-ದೆಹಲಿ ಹೆದ್ದಾರಿ ಮಧ್ಯದಲ್ಲಿ ನಿಂತು ಭೋಜ್‌ಪುರಿ ಹಾಡಿಗೆ ನೃತ್ಯ ಮಾಡುವುದು ಸೆರೆಯಾಗಿದೆ. ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್‌(Viral Video) ಆಗಿದ್ದು, ನೆಟ್ಟಿಗರು ಪೊಲೀಸರು ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು ಟ್ಯಾಗ್ ಮಾಡಿ, ಸಾರ್ವಜನಿಕವಾಗಿ ಆಯುಧವನ್ನು ಪ್ರದರ್ಶಿಸಿದ್ದಕ್ಕಾಗಿ ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಆ ಮಹಿಳೆಯನ್ನು ಶಾಲಿನಿ ಎಂದು ಗುರುತಿಸಲಾಗಿದೆ. ಅವಳು ಸೋಶಿಯಲ್ ಮೀಡಿಯಾ ಖಾತೆಯಲ್ಲಿ 60,000 ಕ್ಕೂ ಹೆಚ್ಚು ಫಾಲೋವರ್ಸ್‍ ಮತ್ತು 2,550 ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಹೊಂದಿದ್ದಾಳೆ.

ವಿಡಿಯೊ ಇಲ್ಲಿದೆ ನೋಡಿ...



ಉತ್ತರ ಪ್ರದೇಶದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ. 2024 ರಲ್ಲಿ, ಯೂಟ್ಯೂಬರ್ ಸಿಮ್ರಾನ್ ಯಾದವ್ ಲಕ್ನೋದ ಹೆದ್ದಾರಿಯಲ್ಲಿ ಪಿಸ್ತೂಲ್ ಹಿಡಿದು ನೃತ್ಯ ಮಾಡುತ್ತಿರುವುದು ಕಂಡುಬಂದಿತ್ತು. ಆ ವಿಡಿಯೊ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಪೊಲೀಸರ ಗಮನ ಸೆಳೆಯಿತು. ನಂತರ ಲಕ್ನೋ ಪೊಲೀಸರು ಪ್ರತಿಕ್ರಿಯಿಸಿ, ತನಿಖೆಗೆ ಆದೇಶಿಸಿದ್ದರು. ಮತ್ತು ಸಂಬಂಧಪಟ್ಟವರಿಗೆ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದ್ದರು.

ಈ ಸುದ್ದಿಯನ್ನೂ ಓದಿ:Viral Video: ಕಿಂಗ್ ಕೋಬ್ರಾವನ್ನು ಬರಿಗೈಯಲ್ಲೇ ಹಿಡಿದ ಆಸಾಮಿ; ಮೈಜುಮ್ಮೆನಿಸುವ ವಿಡಿಯೊ ನೋಡಿ

ಮತ್ತೊಂದು ಘಟನೆಯಲ್ಲಿ 20 ವರ್ಷದ ವ್ಯಕ್ತಿಯೊಬ್ಬ ಕೈಯಲ್ಲಿ ಬಂದೂಕನ್ನು ಹಿಡಿದು ಹಾಗೂ ಇನ್ನೊಂದು ಕೈಯಲ್ಲಿ ಸಿಗರೇಟ್ ಅನ್ನು ಸೇದುತ್ತಾ ರೀಲ್‌ಗಳನ್ನು ಮಾಡಿದ್ದಕ್ಕಾಗಿ ಜೈಲು ಪಾಲಾಗಿದ್ದನು. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ವಿಡಿಯೊದಲ್ಲಿ ಆಯುಷ್ ಪಾಸ್ವಾನ್ ಎಂಬ ವ್ಯಕ್ತಿ ಬಲಗೈಯಲ್ಲಿ ಬಂದೂಕು ಮತ್ತು ಎಡಗೈಯಲ್ಲಿ ಸಿಗರೇಟನ್ನು ಹಿಡಿದುಕೊಂಡು ಕುದುರೆ ಸವಾರಿ ಮಾಡುತ್ತಾ ಸಾರ್ವಜನಿಕ ಸ್ಥಳದಲ್ಲಿ ಹೊಗೆ ಬಿಡುವುದನ್ನು ಸೆರೆಹಿಡಿಯಲಾಗಿದೆ. ಈ ವಿಡಿಯೊ ವೈರಲ್ ಆಗಿ ಪೊಲೀಸರ ಗಮನಸೆಳೆದ ಕಾರಣ ಆತನನ್ನು ಬಂಧಿಸಿದ್ದರು.