ಡೆಹ್ರಾಡೂನ್: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪಾರ್ಟಿ ಪಬ್‍ಗೆ ಹೋಗಿ ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ತೇಲಾಡುತ್ತಾ ರಂಪಾಟ ಮಾಡಿದ ಹಲವಾರು ವಿಡಿಯೊಗಳು ಈ ಹಿಂದೆ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಇದೀಗ ಡೆಹ್ರಾಡೂನ್‌ನ ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಮಹಿಳೆಯ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ. ಮಹಿಳೆ ನಡುರಸ್ತೆಯಲ್ಲಿ ಕುಳಿತಿದ್ದರಿಂದ ವಾಹನ ಸಂಚಾರಕ್ಕೆ ತಡೆಯಾಗಿದೆಯಂತೆ.
ವೈರಲ್ ಆದ ವಿಡಿಯೊದಲ್ಲಿ, ಕಪ್ಪು ಬಣ್ಣದ ಸ್ಲಿವ್‍ಲೆಸ್ ಟಾಪ್ ಮತ್ತು ಡೆನಿಮ್ ಧರಿಸಿದ ಮಹಿಳೆಯೊಬ್ಬಳು ರಸ್ತೆಯ ಮಧ್ಯದಲ್ಲಿ ಕುಳಿತು ಹೈಡ್ರಾಮಾ ಮಾಡಿದ್ದಾಳೆ. ಮಹಿಳೆ ನಡುರಸ್ತೆಯಲ್ಲಿ ಕುಳಿತ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿದೆಯಂತೆ. ಆದರೂ ಮಹಿಳೆ ಅಲ್ಲಿಂದ ಕದಲಲಿಲ್ಲ. ಕೊನೆಗೆ ಇಬ್ಬರು ಭದ್ರತಾ ಸಿಬ್ಬಂದಿ ಸೇರಿದಂತೆ ಕೆಲವು ಪುರುಷರು ಆಕೆಯನ್ನು ರಸ್ತೆಬದಿಯ ಕಡೆಗೆ ಎಳೆದು ತಂದಿದ್ದಾರಂತೆ. ಈ ಘಟನೆಯ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆದರೆ ಈ ವಿಷಯದಲ್ಲಿ ಪೊಲೀಸ್ ಕ್ರಮ ಕೈಗೊಂಡಿರುವ ಬಗ್ಗೆ ಯಾವುದೇ ವರದಿಗಳಿಲ್ಲ.
ವಿಡಿಯೊ ಇದೆ ನೋಡಿ...
ಈ ಸುದ್ದಿಯನ್ನೂ ಓದಿ:Viral Video: ಸಿಕ್ಕಾಪಟ್ಟೆ ವೈರಲ್ ಆಯ್ತು ವಂದೇ ಭಾರತ್ ರೈಲುಗಳ ಈ ವಿಡಿಯೊ; ಅಂತಹದ್ದೇನಿದೆ ಇದರಲ್ಲಿ?
ಇತ್ತೀಚೆಗೆ ಉತ್ತರಾಖಂಡದ ಹರಿದ್ವಾರದಿಂದಲೂ ಇದೇ ರೀತಿಯ ಘಟನೆ ವರದಿಯಾಗಿತ್ತು. ಹರಿದ್ವಾರ ಬಳಿಯ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಘಟನೆಯಲ್ಲಿ ಮಹಿಳೆಯೊಬ್ಬಳು ಕುಡಿದ ಮತ್ತಿನಲ್ಲಿ ಸಂಚಾರ ಸ್ಥಗಿತಗೊಳಿಸಿ, ಚಲಿಸುತ್ತಿರುವ ವಾಹನಗಳ ಮೇಲೆ ಹತ್ತಿ ಅಪಘಾತಕ್ಕೆ ಕಾರಣಳಾಗಿದ್ದಳು.ಈ ಘಟನೆಯ ವಿಡಿಯೊ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿತ್ತು.